ವಿದ್ಯುತ್ ಬೆಲೆ ಏರಿಕೆ ಸಮಸ್ಯೆಗೆ ಶೀಘ್ರ ಪರಿಹಾರ:ನಾಗೇಂದ್ರ










ಬಳ್ಳಾರಿ:ನಗರದ ಬಿಡಿಎಎ ಸಭಾಂಗಣದಲ್ಲಿ ಹಮ್ಮಿಕೊಂಡ ಎಂ ಎಸ್ ಎಂ ಇ ಅಂತಾರಾಷ್ಟ್ರೀಯ ದಿನಾಚರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ನಾಗೇಂದ್ರ ಉದ್ಘಾಟಿಸಿದರು.

ಬಳ್ಳಾರಿ:ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ಎಲ್ಲರ ಸಹಕಾರ ಪಡೆಯುವೆ, ಬಳ್ಳಾರಿಯನ್ನು ಭವ್ಯ ಬಳ್ಳಾರಿ ಮಾಡಲು ಶ್ರಮಿಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ತಿಳಿಸಿದರು.

ನಗರದ ಬಿಡಿಎಎ ಸಭಾಂಗಣದಲ್ಲಿ ಮಂಗಳವಾರ ದಕ್ಷಿಣ ಭಾರತ ಪ್ರಾಂತೀಯ ಚಾರ್ಟರ್ಡ್ ಅಕೌಂಟೆಂಟ್ ಅಸೋಸಿಯೇಶನ್, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಸಹಯೋಗದಲ್ಲಿ ಕೃಷಿ ಆದಾಯ ಹೆಚ್ಚಳದ ವಿಷಯದಲ್ಲಿ ಎಂ ಎಸ್ ಎಂ ಇ ಪಾತ್ರ ವಿಷಯದ ಮೇಲೆ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಎಂ ಎಸ್ ಎಂ ಇ ದಿನಾಚರಣೆಯಲ್ಲಿ ಮಾತನಾಡಿದ ಅವರು, ಚೇಂಬರ್ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಅಸೋಸಿಯೇಶನ್ ಸಹಯೋಗದಲ್ಲಿ ನಗರ, ಜಿಲ್ಲೆ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ಕೋರುವೆ ಎಂದರು.

ವಿದ್ಯುತ್ ಬಿಲ್ ಏರಿಕೆ ವಿಚಾರವಾಗಿ ನೀವು ಹೋರಾಟ ಮಾಡಿದ್ದೀರಾ. ನಿಮ್ಮ ಸಮಸ್ಯೆ ಪರಿಹಾರಕ್ಕೆ ಒಂದಿಷ್ಟು ಕಾಲಾವಕಾಶ ಬೇಕಿದೆ. ಹಿಂದಿನ ಸರ್ಕಾರ ಮಾಡಿದ ತಪ್ಪುಗಳನ್ನು ಸರಿಪಡಿಸಲು ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಹಿರಿಯ ಸಚಿವರು ಪ್ರಯತ್ನಿಸುತ್ತಿದ್ದಾರೆ. ಖಂಡಿತಾ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಅವರು ತಿಳಿಸಿದರು.

ಕೂಡ್ಲಿಗಿ ಶಾಸಕ ಬಿ.ಎಂ.ನಾಗರಾಜ್, ಚಾಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಶ್ರೀನಿವಾಸ ರಾವ್, ದಕ್ಷಿಣ ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ ಸಂಘದ ಪ್ರಾಂತೀಯ ಅಧ್ಯಕ್ಷ ಸಿರಿಗೆರೆ ಪನ್ನರಾಜ್, ಮೇಯರ್ ತ್ರಿವೇಣಿ, ಉಪ ಮೇಯರ್ ಜಾನಕಮ್ಮ ವೇದಿಕೆಯಲ್ಲಿ ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ