ಹೆಣ್ಣು ಸಿಗದೆ ಆತ್ಮಹತ್ಯೆ ಮಾಡಿಕೊಂಡ ಚಂದದ ಯುವಕ!

 


ಕಾರವಾರ: ನೋಡೋಕೆ ಫಿಲ್ಮ್ ಹೀರೋ ತರಹ ಇರುವ ಯುವಕನೋರ್ವ ಮದುವೆಗೆ ಹೆಣ್ಣು ಸಿಗಲಿಲ್ಲ ಎಂಬ ವಿಚಾರಕ್ಕೆ ಜಿಗುಪ್ಸೆಗೊಂಡು ಸುಂದರ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಾರವಾರ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ನಡೆದಿದೆ.

ಯಲ್ಲಾಪುರದ ತೇಲಂಗಾರದ ಕಿರಗಾರಿಮನೆ ನಿವಾಸಿ ನಾಗರಾಜ ಗಣಪತಿ ಗಾಂವ್ಕರ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಯಲ್ಲಾಪುರದ ತೇಲಂಗಾರ ಕಿರಗಾರಿಮನೆಯಲ್ಲಿ ಕೃಷಿ ಮಾಡಿಕೊಂಡಿದ್ದ ಈತ ಮದುವೆಯಾಗಲು ಕಳೆದ ಹಲವು ವರ್ಷಗಳಿಂದ ಪ್ರಯತ್ನ ನಡೆಸಿದ್ದ. ಮದುವೆಯಾಗಲೂ ಸಾಕಷ್ಟು ಹುಡುಕಾಟ ನಡೆಸಿದರು ಕೂಡ ಎಲ್ಲಿಯೂ ಸಬಂಧ ಹೊಂದಿಕೆಯಾಗಿರಲಿಲ್ಲ. ಇದರಿಂದ ಜಿಗುಪ್ಸೆಗೊಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೃಷಿಯಲ್ಲಿ ತೊಡಗಿದ ಯುವಕರಿಗೆ ಹೆಣ್ಣು ಸಿಗುತ್ತಿಲ್ಲ ಎಂಬ ಮಾತು ಕೇಳಿಬರುತ್ತಿದ್ದು, ಇದೀಗ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಇದಕ್ಕೆ ಪುಷ್ಟಿ ಕೊಟ್ಟಿದೆ.
ಅದು ಅಲ್ಲದೆ ಮದುವೆಗಾಗಿ ಸಂಬಂಧಿಕರು, ಬ್ರೋಕರ್ಗಳ ಬಳಿ ಹೆಣ್ಣು ಹುಡುಕಿಕೊಡಲು ಸಾಕಷ್ಟು ಪ್ರಯತ್ನ ನಡೆಸಿದರು ಅದರಿಂದಲೂ ಸಾಧ್ಯವಾಗಿರಲಿಲ್ಲ. ಇದರಿಂದ ನಾಗರಾಜ ಪ್ರತಿನಿತ್ಯ ಯೋಚನೆಯಲ್ಲಿಯೇ ಮುಳುಗುತ್ತಿದ್ದ. ಇದನ್ನೆ ಮನಸ್ಸಿಗೆ ಹಚ್ಚಿಕೊಂಡು ಖಿನ್ನತೆಗೆ ಒಳಗಾಗಿದ್ದ. ಇಂದು ಆತನ ಮನೆಯ ಸಮೀಪದ ಗುಡ್ಡಕ್ಕೆ ತೆರಳಿ ಮರವೊಂದಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ