ಅಲೆಮಾರಿ, ಅರೆಅಲೆಮಾರಿ ಸಮುದಾಯ ಪ್ರಗತಿಗಾಗಿ ಹಲವು ಬೇಡಿಕೆಗೆ|ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದನೆ

  


ಬೆಂಗಳೂರು, ಜುಲೈ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ರಾಜ್ಯ ಮುಖಂಡರೊಂದಿಗೆ ಅಲೆಮಾರಿ ಜನರ ಕುಂದುಕೊರತೆಗಳ ಕುರಿತು ಸಭೆ ಜರುಗಿತು.


ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ,ಹಿರಿಯ ಪತ್ರಕರ್ತ ಹಾಗೂ ಚಿಂತಕ ಇಂದೂಧರ ಹೊನ್ನಾಪುರ, ಹಂಪಿ ಕನ್ನಡ ವಿ.ವಿ ಹಿರಿಯ ಉಪನ್ಯಾಸಕ ಡಾ: ಮೇತ್ರಿ, ಲೀಲಾ ಸಂಪಿಗೆ ಮತ್ತಿತರರು ಉಪಸ್ಥಿತರಿದ್ದರು.


ಕರ್ನಾಟಕ ಅಲೆಮಾರಿ, ಅರೆ ಅಲೆಮಾರು ಹಾಗೂ ವಿಮುಕ್ತ ಬುಡಕಟ್ಟುಗಳ ಒಕ್ಕೂಟ, ಎಸ್.ಸಿ ಎಸ್ ಟಿ ಅಲೆಮಾರಿ, ವಿಮುಕ್ತ ಬುಡಕಟ್ಟು ಮಹಾಸಬಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿಗಳ ವೇದಿಕೆ, ಕರ್ನಾಟಕ ರಾಜ್ಯ ಅಲೆಮಾರಿ, ಅಲೆಮಾರಿ, ಪ್ರ-1, 46 ಜಾತಿ ಜನಾಂಗಗಳ ಒಕ್ಕೂಟ, ಕರ್ನಾಟಕ ಪ.ಜಾ ಮತ್ತು ಪ.ವರ್ಗ ಅಲೆಮಾರಿ, ಬುಡಕಟ್ಟು ಮಹಾ ಸಭಾ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಲೆಮಾರಿ, ಅರೆಅಲೆಮಾರಿ ವಿಮುಕ್ತ ಬುಡಕಟ್ಟು ಮಹಾ ಒಕ್ಕೂಟ ಹಾಗೂ ಅಖಿಲ ಭಾರತ ಅಲೆಮಾರಿ ಬುಡಕಟ್ಟು ಮಹಾಸಭಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ