ವೀವಿ ಸಂಘದಲ್ಲಿ ವೈದ್ಯರ ದಿನಾಚರಣೆ
ಬಳ್ಳಾರಿ:ನಗರದ ವೀರಶೈವ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ಭಾರತೀಯ ವೈದ್ಯಕೀಯ ಸಂಘದಿಂದ ಹಮ್ಮಿಕೊಂಡಿದ್ದ 32ನೇ ರಾಷ್ಟ್ರೀಯ ವೈದ್ಯರ ದಿನವನ್ನು ಡಾ.ಎನ್. ಸೋಮೇಶ್ವರ್ ಹಾಗೂ ಸಂಘದ ಅಧ್ಯಕ್ಷರಾದ ರೇಣುಕಾ ಮಂಜುನಾಥ್ ಅವರು ಜ್ಯೋತಿ ಬೆಳಗಿಸಿ, ಸಸಿಗೆ ನೀರೆರೆದು ಉದ್ಘಾಟಿಸಿದರು.
ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಿ ನೀಡಿ ತಮ್ಮ ಸರಾಸರಿ ವಯಸ್ಸು ಕಡಿಮೆ ಮಾಡಿಕೊಳ್ಳುತ್ತಿದ್ದಾರೆ. ಅವರ ಸೇವೆ ಅನನ್ಯ. ಕಳೆದ ಕೆಲವು ವರ್ಷಗಳಿಂದ ಸರ್ಕಾರ ವೈದ್ಯರಿಗೆ ನೀಡುವ ಪ್ರಶಸ್ತಿ ನಿಲ್ಲಿಸಿದೆ. ಅದನ್ನು ಮುಂದುವರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಕರೋನ ಸಂದರ್ಭದಲ್ಲಿ ಹಗಲಿರುಳು ಶ್ರಮಿಸಿದ ವೈದ್ಯರನ್ನು, ಹೆಚ್ಚು ಸಾರಿ ರಕ್ತದಾನ ಮಾಡಿದವರನ್ನು, ಸಮಾಜ ಸೇವಕರನ್ನು , ಮಾದ್ಯಮದವರನ್ನು ಹಾಗೂ ಸಂಗೀತಗಾರರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಿದರು.
ಇದೇ ಸಂದರ್ಭದಲ್ಲಿ 25ಸಾರಿ ಸ್ವಯಂ ಪ್ರೇರಿತ ಉಚಿತ ರಕ್ತದಾನ ಮಾಡಿದ ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾದ ರವಿಚೇಳ್ಳಗುರ್ಕಿ ಅವರನ್ನು ಸನ್ಮಾನಿಸಲಾಯಿತು. ಜೊತೆಗೆ ಮುಂದುವರಿಸಿಕೊಂಡು ಹೋಗುವಂತೆ ಹೇಳಿ ಶುಭಕೋರಿದರು.
ವಿಮ್ಸ್ ನಿರ್ದೇಶಕ ಡಾ. ಗಂಗಾಧರ, ಜಿಲ್ಲಾ ಸರ್ಜನ್ ಬಸರೆಡ್ಡಿ,ಹಾಸ್ಯ ಕಲಾವಿದರಾದ ಇಂದುಮತಿ ಸಾಲಿಮಠ, ಸಂಘದ ಉಪಾಧ್ಯಕ್ಷ ಡಾ.ಡಿ.ಶ್ರೀನಿವಾಸುಲು,ಕಾರ್ಯದರ್ಶಿ ಡಾ.ಚಂದ್ರಶೇಖರ್ ಪಾಟೀಲ್, ಜಂಟಿ ಕಾರ್ಯದರ್ಶಿ ಡಾ.ರಾಘವೇಂದ್ರ, ಖಜಾಂಚಿ ವಿ.ಜೆ.ಭಾರತ್ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ