ತುಕಾರಾಂ-ಭರತ್ ರೆಡ್ಡಿ ವರ್ಸಸ್ ನಾಗೇಂದ್ರ?

 ಶಾಸಕ- ಸಚಿವರ ನಡುವೆ ನಡೆಯುತ್ತಿದೆ ಮುಸುಕಿನ ಗುದ್ದಾಟ!

ಬಳ್ಳಾರಿ:ಜಿಲ್ಲೆಯ ಐದೂ ಸ್ಥಾನಗಳನ್ನು ಗೆದ್ದು ಬೀಗುತ್ತಿರುವ ಕಾಂಗ್ರೆಸ್‌ಗೆ ಈಗ ಒಳಜಗಳದ ಕಾವು ಬಡಿದಿದೆ. ಇನ್ನೇನು 7-8 ತಿಂಗಳಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆಂತರಿಕ ಕಚ್ಚಾಟ ತಾರಕಕ್ಕೇರುವ ಲಕ್ಷಣ ಗೋಚರಿಸುತ್ತಿವೆ.

ಮಾಜಿ ಸಚಿವ, ಸಂಡೂರು ಶಾಸಕ, ಸಂತೋಷ್ ಲಾಡ್ ಅನುಯಾಯಿ ಇ. ತುಕಾರಾಂ, ಮಾಜಿ ಶಾಸಕ ನಾರಾ ಸೂರ್ಯನಾರಾಯಣ ರೆಡ್ಡಿ ಪುತ್ರ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ನಾಗೇಂದ್ರ ವಿರುದ್ಧ ತಿರುಗಿಬಿದ್ದಿದ್ದಾರೆ ಎಂಬ ಮಾತು ಕೇಳಿಬರುತ್ತಿವೆ. 

ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ವರ್ಗಾವಣೆ ವಿಚಾರದಲ್ಲಿ ನಾಗೇಂದ್ರ ಶಾಸಕರ ಅಭಿಪ್ರಾಯ ಪಡೆಯದೆ ಏಕಪಕ್ಷೀಯ ನಿರ್ಧಾರ ಕೈಗೊಂಡರೆಂದು ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ.

ಮೂಲಗಳ ಪ್ರಕಾರ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ವರ್ಗಾವಣೆ ಆದೇಶ ಹೊರಬೀಳುತ್ತಲೇ ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಅತೃಪ್ತ ಶಾಸಕರು ಸಭೆ ನಡೆಸಿದ್ದಾರಂತೆ. ಅಲ್ಲಿಯೇ ಶತಾಯ ಗತಾಯ ಈ ವರ್ಗಾವಣೆ ಆಗಬೇಕು. ಆದರೆ, ಯಾವುದೇ ಕಾರಣಕ್ಕೂ ಟಿ. ವೆಂಕಟೇಶ್ ಇಲ್ಲಿಗೆ ಬರಬಾರದು. ನಾವು ಸೂಚಿಸುವವರೇ ಜಿಲ್ಲಾಧಿಕಾರಿ ಆಗಿಬರುವಂತೆ ನೋಡಿಕೊಳ್ಳಬೇಕು ಎಂದು ಶಾಸಕರು ನಿರ್ಧಾರ ಮಾಡಿ, ಇದೇ ನಿರ್ಧಾರವನ್ನು ಮುಖ್ಯಮಂತ್ರಿಗೆ ರವಾನಿಸಿದ್ದಾರೆಂದು ತಿಳಿದುಬಂದಿದೆ. ಇದೆಲ್ಲದ್ದರ ಹಿಂದೆ ಮಾಹಿತಿ ಮತ್ತು ಮೂಲಸೌಕರ್ಯ ಸಚಿವ ಸಂತೋಷ್ ಲಾಡ್ ಕೈ ಇದೆ ಅಂತೆಲ್ಲಾ ಕಾಂಗ್ರೆಸ್ ಪಡಸಾಲೆಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ ನಾಗೇಂದ್ರರ ಹಿಂದೆ ರಾಜ್ಯಸಭಾ ಸದಸ್ಯ ನಾಸೀರ್ ಸಹ ಇದ್ದಾರಂತೆ!

ಪವನ್ ಕುಮಾರ್ ಮಾಲಪಾಟಿ ಮತ್ತು ಭರತ್ ರೆಡ್ಡಿ ನಡುವಿನ ಸಂಬಂಧ ಬಹಳ ದಿನಗಳಿಂದ ಹಳಸಿತ್ತು ಎಂಬುದು ಎಲ್ಲರಿಗೂ ತಿಳಿದೇ ಇದೆ. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*