ಮಿಷನ್ ಇಂದ್ರಧನುಷ್ ಅಭಿಯಾನದಡಿಯಲ್ಲಿ ಎಲ್ಲಾ ಮಕ್ಕಳಿಗೆ ಉಚಿತ ಲಸಿಕೆ

 


ಮಾನ್ವಿ: ತಾಲೂಕಿನ ಪೋತ್ನಾಳ ಗ್ರಾಮದ ಜನತಾ ಕಾಲೋನಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಪಾಲಕರಿಗೆ ಹೂ ನೀಡುವ ಮೂಲಕ ಮಿಷನ್ ಇಂದ್ರಧನುಷ್ ಅಭಿಯಾನದಡಿಯಲ್ಲಿ ನೀಡಲಾಗುವ ಲಸಿಕೆಗಳನ್ನು ತಮ್ಮ ಮಕ್ಕಳಿಗೆ ಹಾಕಿಸುವಂತೆ ವಿನೂತನವಾಗಿ ಜಾಗೃತಿ ಮೂಡಿಸಲಾಯಿತು.

ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಮಾತನಾಡಿ ನಿಮ್ಮ ಮನೆಯಲ್ಲಿರುವ 5 ವರ್ಷದೊಳಿಗಿನ ಎಲ್ಲಾ ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ಉಚಿತವಾಗಿ ಅ.7ರಿಂದ 12ರವರೆಗೆ ಮಕ್ಕಳಿಗೆ ಅಗತ್ಯವಿರುವ ಎಲ್ಲಾ ಲಸಿಕೆಗಳನ್ನು ಅಂಗನವಾಡಿ ಕೇಂದ್ರ ಹಾಗೂ ಆರೋಗ್ಯ ಉಪಕೇಂದ್ರಗಳಲ್ಲಿ ನೀಡಲಾಗುತ್ತಿದು ತಾವು ತಪ್ಪದೇ ಸಾರ್ವತ್ರಿಕವಾಗಿ ಲಸಿಕೆಯನ್ನು ಕೊಡಿಸುವ ಮೂಲಕ ಮಕ್ಕಳಿಗೆ ಬರುವ ಗಂಭಿರ ಕಾಯಿಲೆಗಳಿಂದ ರಕ್ಷಿಸಬೇಕು ಎಂದು ತಿಳಿಸಿದರು.

 ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆಯನ್ನು ಹಾಕಿಸುವಂತೆ ಜಾಗೃತಿ ಮೂಡಿಸÀಲಾಯಿತು. ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ ಸೇರಿದಂತೆ ಇನ್ನಿತರರು ಇದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*