ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ: ಸಿಇಒ ಶಶಿಧರ ಕುರೇರ
ರಾಯಚೂರು,ಜು.೧೨(ಕ.ವಾ):- ಜು.೧೭ ರಿಂದ ಆ.೦೨ರವರೆಗೆ ನಡಯುವ ಕ್ಷಯರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕ್ಷಯ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಖಾರಿ ಶಶಿಧರ ಕುರೇರ ಅವರು ಹೇಳಿದರು.
ಅವರು ಜು.೧೨ರ(ಬುಧವಾರ)ದಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಕ್ಷಯ ರೋಗದ ಕುರಿತಾದ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸುರೇಂದ್ರಬಾಬು ಅವರು ಮಾತನಾಡಿ, ನಮ್ಮ ಇಲಾಖೆಯ ಸಿಬ್ಬಂದಿಗಳಿAದ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಿಗೆ ಎರಡು ವಾರಕ್ಕಿಂತ ಕೆಮ್ಮು ರಾತ್ರಿ ಸಮಯದಲ್ಲಿ ಜ್ವರ ಬರುವದು ತೂಕ ಕಡಿಮೆಯಾಗುವದು ಹಸಿವುಯಾಗದಿರುವದು ಇಂತಹ ಲಕ್ಷಣಗಳು ಕಂಡುಬAದಲ್ಲಿ ತಕ್ಷಣವೇ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಹತ್ತಿರ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ ಎಂದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹ್ಮದ ಶಾಕೀರ ಮೊಹಿದ್ದೀನ ಅವರು ಮಾತನಾಡಿ, ಕ್ಷಯರೊಗದ ತ್ವರಿತ ಪತ್ತೆಗಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಿಗೆ ಸಿಬಿಎನ್‌ಎಎಟಿ ಯಂತ್ರಗಳನ್ನು ಪೂರೈಸಲಾಗಿದೆ ಕ್ಷಯರೋಗಿಯು ಕೆಮ್ಮುವಾಗ, ಸೀನುವಾಗ ಕರವಸ್ತçದಿಂದ ಬಾಯಿ ಮತ್ತು ಮೂಗನ್ನು ಮಚ್ಚಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಜು.೧೭ ರಿಂದ ನಡೆಯುವ ಕ್ಷಯರೋಗ ಪತ್ತೆ ಹಚ್ಚುವ ಆಂದೋಲನ ಕಾರ್ಯಕ್ರಮದಲ್ಲಿ ಒಟ್ಟು ೩೭೦ ತಂಡಗಳು ಇದರಲ್ಲಿ ೧೯೪ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತç ಚಿಕಿತ್ಸಕ ಡಾ.ವಿಜಯ ಶಂಕರ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗಣೇಶ, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ.ನಂದಿತಾ, ಬನದೇಶ, ಡಾ. ಚಂದ್ರಶೇಖರ ಸ್ವಾಮಿ, ಡಾ.ಅಯ್ಯನಗೌಡ, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ