ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಮಾನ್ವಿ ತಾಲ್ಲೂಕಿನಲ್ಲಿ ಮೌನ ಪ್ರತಿಭಟನೆ

 


ಮಾನ್ವಿ:-ಜೂ,12,ಕೇಂದ್ರ ಬಿಜೆಪಿ ಸರ್ಕಾರ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್‌ ತಾಲೂಕ ಘಟಕದ ನೇತೃತ್ವದಲ್ಲಿ ಬಸವೇಶ್ವರ ವೃತ್ತದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಹಿರಿಯ ಮುಖಂಡ ಬಾಲಸ್ವಾಮಿ ಕೊಡ್ಲಿ ಮಾತನಾಡಿ, ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂ​ಧಿದೇಶದ ಒಳಿತಿಗಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಿದ್ದಾರೆ. ರಾಜಕೀಯ ಟೀಕೆ, ಟಿಪ್ಪಣಿಗಳು ಸಹಜವಾಗಿ ಮಾಡಿದ್ದಾರೆ. ಆದರೆ, ಪ್ರಶ್ನೆಗಳಿಗೆ ಉತ್ತರಿಸಲಾಗದ ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ದ್ವೇಷ 

ಸಾ​ಧಿಸುತ್ತಿದೆ. ಇಂತಹ ರಣಹೇಡಿ ಕೆಲಸ ಮಾಡುವುದು ತರವಲ್ಲ.

ರಾಹುಲ್‌ ಗಾಂಧಿ ​ಮಾತನಾಡಿದ್ದು ಕರ್ನಾಟಕದಲ್ಲಿ ಆದರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಜರಾತನಲ್ಲಿ ಪ್ರಕರಣ ದಾಖಲಿಸುವಂತೆ ನೋಡಿಕೊಂಡಿದ್ದಾರೆ. ಅಲ್ಲದೇ ನ್ಯಾಯಾಲಯದ ಮೇಲೆ ಒತ್ತಡ ಹಾಕಿ ನ್ಯಾಯಾಂಗ ವ್ಯವಸ್ಥೆ ದುರುಪಯೋಗ ಪಡಿಸಿಕೊಂಡಿದ್ದಾರೆ. ಹೈಕೋರ್ಟ್ ಮೇಲೆ ಒತ್ತಡ ಹಾಕಿ ರಾಹುಲ್‌ ಗಾಂಧಿ ​ವಿರುದ್ಧ ತೀರ್ಪು ಬರುವಂತೆ ನೋಡಿಕೊಂಡಿದ್ದಾರೆ. ಇಂತಹ ರಾಜಕೀಯ ನಾಟಕ ಬಹಳ ದಿನ ನಡೆಯುವುದಿಲ್ಲ. ಅ​ಧಿಕಾರದಲ್ಲಿ ಯಾರು ಶಾಶ್ವತವಾಗಿ ಇರುವುದಿಲ್ಲ. ಇದನ್ನು ನೆನಪಿಟ್ಟುಕೊಳ್ಳಿ. ದೇಶದಲ್ಲಿ ಸಾಮಾಜಿಕ, ಆರ್ಥಿಕ, ಶಾಸಕಾಂಗ, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ದೇಶಕ್ಕೆ ಸಂಬಂಧಪಟ್ಟಂತೆ ಪ್ರಶ್ನೆ ಮಾಡುವುದು ಕೂಡಾ ದೇಶ ವಿರೋಧಿ ​ಅಂತ ಬಿಂಬಿಸಲು ಹೊರಟಿದ್ದಾರೆ ಬಿಜೆಪಿ ನಾಯಕರು. ಇಂತಹ ಗೊಡ್ಡು ಬೆದರಿಕೆಗೆ ಯಾರು ಹೆದರುವುದಿಲ್ಲ. ಇದೇ ರೀತಿ ಮುಂದುವರೆದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಜಿಲ್ಲಾ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ಪುರಸಭೆ ಸದಸ್ಯರು, ಕಾಂಗ್ರೆಸ್ ಪಕ್ಷದ ಯುವ ಮುಖಂಡರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ