ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ : ಕಾರ್ಗಿಲ್ ವಿಜಯೋತ್ಸವ ದಿನಾಚರಣೆ

 

ಕೊಟ್ಟೂರು: ಕೊಟ್ಟೂರೇಶ್ವರ ಮಹಾವಿದ್ಯಾಲಯ ಕೊಟ್ಟೂರಿನಲ್ಲಿ ಬುಧವಾರ ರಂದು ಕಾರ್ಗಿಲ್ ವಿಜಯೋತ್ಸವ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಶ್ರೀ ಸಿದ್ದರಾಮ ಕಲ್ಮಠ ರವರ ಮಾರ್ಗದರ್ಶನ ಮತ್ತು ಶುಭ ಹಾರೈಕೆಯೊಂದಿಗೆ ಪ್ರಾರಂಭಿಸಲಾಯಿತು.

 ಕುಮಾರಿ ಕೀರ್ತನ ಮತ್ತು ಚಂದನ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.ಕಾರ್ಯಕ್ರಮದ ಸ್ವಾಗತವನ್ನು ಕನ್ನಡ ವಿಭಾಗದ ಪ್ರಾಧ್ಯಾಪಕರಾಗಿರುವ ವೀರೇಶ್ ಅವರು ನೆರವೇರಿಸಿದರು. ಪ್ರಾಸ್ತಾವಿಕ ನುಡಿಯನ್ನು ಡಾ. ಪೃಥ್ವಿರಾಜ್ ಸಿ. ಬೆಡ್ಜರಿಗಿ ನೆರವೇರಿಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಇತಿಹಾಸ ವಿಭಾಗದ ಮುಖ್ಯಸ್ಥರಾಗಿರುವ ಡಾ. ಜೆ .ಬಿ .ಸಿದ್ದನಗೌಡರು ನೆರವೇರಿಸಿ, ದಿನದ ಇತಿಹಾಸದ ಬಗ್ಗೆ ಮಕ್ಕಳಿಗೆ ತಿಳಿಸಿಕೊಟ್ಟರು.

ಕಾರ್ಗಿಲ್ ವಿಜಯೋತ್ಸವದ ಮತ್ತು ಸೈನಿಕರ ಕೊಡುಗೆಯ ಬಗ್ಗೆ ಎನ್ ಸಿ ಸಿ ವಿಭಾಗದ ಮುಖ್ಯಸ್ಥರು ಮತ್ತು ಕಂಪ್ಯೂಟರ್ ಸೈನ್ಸ್ ಮುಖ್ಯಸ್ಥರಾಗಿರುವ ಸಿ. ಬಸವರಾಜ್ ರವರು ಬಹಳ ವಿಸ್ತಾರವಾಗಿ ಸೈನಿಕರ ಕೊಡುಗೆಯ ಬಗ್ಗೆ ತಿಳಿಸಿಕೊಟ್ಟರು. ಅದೇ ರೀತಿಯಾಗಿ ಶ್ರೀ ರಾಧಾ ಸ್ವಾಮಿ ಮುಖ್ಯಸ್ಥರು ರಾಜ್ಯಶಾಸ್ತ್ರ ವಿಭಾಗ ಕಾರ್ಗಿಲ್ ವಿಜಯೋತ್ಸವದ ವಿಶೇಷತೆಯ ಬಗ್ಗೆ ವಿವರಿಸಿದರು.ವಿದ್ಯಾರ್ಥಿ ನರೇಂದ್ರ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಅಧ್ಯಕ್ಷೀಯ ನುಡಿಯನ್ನು ಪ್ರಾಚಾರ್ಯರಾಗಿರುವ ಡಾ. ಎಂ .ರವಿಕುಮಾರ್ ಅವರು ವಿದ್ಯಾರ್ಥಿಗಳಿಗೆ ಸೈನಿಕರ ಪಾತ್ರ ಮತ್ತು ವಿದ್ಯಾರ್ಥಿಗಳ ಪಾತ್ರ ದೇಶಕ್ಕಾಗಿ ನಮ್ಮನ್ನು ನಾವು ತೊಡಗಿಸುವ ವಿಚಾರವನ್ನು ಮಕ್ಕಳಿಗೆ ಮನಮುಟ್ಟುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪ್ರಶಾಂತ್ ಮತ್ತು ಉಪನ್ಯಾಸಕರುಗಳಾದ ಡಾ. ಶಿವಕುಮಾರ್ ಶ್ರೀ ಉಮೇಶ್. ಶ್ರೀ ಬಸವರಾಜ್ ಶ್ರೀ ರಮೇಶ್ ಶ್ರೀ ಅನಿಲ್ ಉಪಸ್ಥಿತರಿದ್ದರು. ಕುಮಾರಿ ಶಾರದ ನಿರೂಪಿಸಿದರು ಮತ್ತು ಕುಮಾರಿ ನೇತ್ರ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ