'ಗೃಹಲಕ್ಷ್ಮಿ' ಯೋಜನೆಗೆ ಚಾಲನೆ ನೀಡಿದ 'ರಾಹುಲ್ ಗಾಂಧಿ' ; ಇಂದಿನಿಂದಲೇ ಯಜಮಾನಿಯರ ಖಾತೆಗೆ 2 ಸಾವಿರ ಹಣ ಜಮಾ
ಮಸ್ಕಿ : ಪಟ್ಟಣದ ಭ್ರಮರಾಂಬ ದೇವಾಸ್ಥಾನದ ಸಭಾಂಗಣದಲ್ಲಿ ಗೃಹಲಕ್ಷ್ಮಿ' ಯೋಜನೆಗೆ ರಾಜ್ಯದ ಮುಖ್ಯಮಂತ್ರಿ ನೇತೃತ್ವದಲ್ಲಿ ಸಮಸ್ತ ಕಾಂಗ್ರೆಸ್ ಹೈ ಕಮಾಂಡ್ ನಾಯಕರಿಂದ ಅಧಿಕೃತವಾಗಿ ಚಾಲನೆ ನೀಡುವ ನೇರ ಪ್ರಸಾರದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನಂತರ ಗೃಹಲಕ್ಷ್ಮಿ ಯೋಜನೆಗೆ ರಾಹುಲ್ ಗಾಂಧಿ ಅಧಿಕೃತ ಚಾಲನೆ ನೀಡಿದರು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಸಂವಿದಾನ ಪೂರ್ವ ಪೀಠಿಕೆ ಓದಲಾಯಿತು ಇದೇ ವೇಳೆ ನೇರ ಪ್ರಸಾರ ವೀಕ್ಷಕರು ಎದ್ದು ನಿಂತು ಗೌರವ ಸೂಚಿಸಿದರು.ನಂತರ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಗೃಹಲಕ್ಷ್ಮಿ' ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದರು. ಈ ಮೂಲಕ ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಇಂದಿನಿಂದಲೇ ಪ್ರತಿ ತಿಂಗಳು 2000 ಹಣ ಮನೆ ಯಜಮಾನಿಯರ ಖಾತೆಗೆ ವರ್ಗಾವಣೆಯಾಗಲಿದೆ.ನೇರ ಪ್ರಸಾರದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಸಚಿವರು ಪಾಲ್ಗೊಂಡಿದ್ದರು. ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸಲು ಭ್ರಮರಾಂಬ ಸಭಾಂಗಣದಲ್ಲಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸಿದ್ದರು.
ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ 2000 ರೂ ನೀಡುವ 'ಗೃಹಲಕ್ಷ್ಮಿ' ಯೋಜನೆಗೆ ಡಿಜಿಟಲ್ ಬಟನ್ ಒತ್ತುವ ಮೂಲಕ ಚಾಲನೆ ನೀಡಲಾಯಿತು. ಈ ಮೂಲಕ ಮೈಸೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಅಧಿಕೃತವಾಗಿ ಚಾಲನೆ ನೀಡಿದರು. ಪೊಲೀಸ್ ಇಲಾಖೆಯ ಬಿಗಿ ಬಂದೋಬಸ್ತ್ ನಿಂದ ಕಾರ್ಯಕ್ರಮ ಯಶಸ್ವಿಯಾಯಿತು.
ಕಾರ್ಯಕ್ರಮದ ನಂತರ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಕರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಇದೇ ಸಂದರ್ಭದಲ್ಲಿ ಮಸ್ಕಿ ಶಾಸಕರಾದ ಆರ್. ಬಸನಗೌಡ ತುರ್ವಿಹಾಳ, ತಹಸೀಲ್ದಾರ್ ಅರಮನೆ ಸುಧಾ, ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು,ನರಸರೆಡ್ಡಿ ಪುರಸಭೆ ಮುಖ್ಯಾಧಿಕಾರಿ,ಪುರಸಭೆ ಸಿಬ್ಬಂದಿ, ತಾಲೂಕ ಪಂಚಾಯತ್ ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆಗೆ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಪುರುಷರು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ