30ರಂದು ಗೃಹಲಕ್ಷ್ಮೀ ಯೋಜನೆ ಚಾಲನೆ
ಬಳ್ಳಾರಿ:ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆ.30 ರಂದು ಮೈಸೂರು ನಗರದಲ್ಲಿ ಚಾಲನೆ ನೀಡಲಿದ್ದು ಅದೇ ದಿನ ನಗರದ ಎಕ್ಸ್ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಮನೆ ಯಜಮಾನಿ ಖಾತೆಗೆ 2 ಸಾವಿರ ರು.ಗಳನ್ನು ಹಾಕುವ ಯೋಜನೆಗೆ ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.
ಮೈಸೂರು ಕಾರ್ಯಕ್ರಮದ ನೇರ ಪ್ರಸಾರವನ್ನು ಎಲ್ ಇ ಡಿ ಪರದೆ ಮೇಲೆ ಪ್ರಸಾರ ಮಾಡಲಾಗುವುದು ಎಂದರು.
ಜಿಲ್ಲೆಯ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಕಾರ್ಯಕ್ರಮ ವಾಲ್ಮೀಕಿ ಭವನದಲ್ಲಿ ಉಳಿದ ಕ್ಷೇತ್ರಗಳಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಯ 2 ಲಕ್ಷ 47 ಸಾವಿರ ನಾಲ್ಕು ನುರ ಇಪ್ಪತ್ತೇಳು ಫಲಾನುಭವಿಗಳಿಗೆ 49 ಕೋಟಿ 48 ಸಾವಿರ 54 ಸಾವಿರ ರು.ಅನುದಾನ ವಿತರಣೆ ಮಾಡಲಾಗುವುದು ಎಂದರು.
43% ಮಳೆ ಕಡಮೆ ಆಗಿದೆ. ತಾಲ್ಲೂಕುವಾರು ಪರಿಸ್ಥಿತಿ ಅರಿಯಲು ಪ್ರತೀ ತಾಲ್ಲೂಕು ಮಟ್ಟದಲ್ಲಿ ಸಭೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಮೇಯರ್ ಡಿ.ತ್ರಿವೇಣಿ, ಉಪ ಮೇಯರ್ ಜಾನಕಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ