ಸರ್ಕಾರದ ಸೌಲಭ್ಯ ಪಡೆದು ಆರ್ಥಿಕವಾಗಿ ಸದೃಢಗೊಳ್ಳಿ:ತಹಶೀಲ್ದಾರ್ ಅಮರೀಶ್ ಜಾಲಹಳ್ಳಿ"

 

"ಗೃಹಲಕ್ಷ್ಮಿ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಿ"

ಕೊಟ್ಟೂರು : ಪಟ್ಟಣದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯ್ತಿ ಸಹಯೋಗದೊಂದಿಗೆ ಬುಧವಾರ ಏರ್ಪಡಿಸಿದ್ದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸರ್ಕಾರದ  ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ವಿಡೀಯೋ ಮುಖಾಂತರ ಲೈವ್ ದೃಶ್ಯಗಳನ್ನು ಬಿತ್ತರಿಸಲಾಯಿತು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿರುವ ತಹಶೀಲ್ದಾರ್ ಅಮರೀಶ್ ಜಾಲಹಳ್ಳಿ ಅವರು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿ ಮಾತನಾಡಿ  ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸದೃಢಗೊಳ್ಳಿರಿ ಎಂದು   ಹೇಳಿದರು.

"ಸರ್ಕಾರದ ಸೌಲಭ್ಯ ಪಡೆದು ಆರ್ಥಿಕವಾಗಿ ಸದೃಢಗೊಳ್ಳಿ:ತಹಶೀಲ್ದಾರ್ ಅಮರೀಶ್ ಜಾಲಹಳ್ಳಿ"


ತಾಲೂಕಿನಾದ್ಯಂತ, ಗ್ರಾಮಾಂತರ ಪ್ರದೇಶದಿಂದ 19,674 ಹಾಗೂ ಪಟ್ಟಣದಿಂದ  5,041 ಒಟ್ಟು ತಾಲ್ಲೂಕಿನಿಂದ 24,715 ಅರ್ಜಿ ಸಲ್ಲಿಕೆಯಾಗಿವೆ ಎಂದರು.

ಗ್ರಾಮೀಣ ಪ್ರದೇಶದಿಂದ 13,994 ಹಾಗೂ ಪಟ್ಟಣದಿಂದ 3,412  ಒಟ್ಟು 17,406 ಅರ್ಜಿದಾರರಿಗೆ ಮಂಜೂರಾಗಿದ್ದು ಬಾಕಿ ಫಲಾನುಭವಿಗಳಿಗೆ ತಾಂತ್ರಿಕ ದೋಷದಿಂದ ತಿರಸೃತವಾಗಿದ್ದು ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಅವರಿಗೂ ಸಹ ಸೌಲಭ್ಯ ದೊರೆಯುತ್ತದೆ ಎಂದರು.

ನಿರೀಕ್ಷೆಗಿಂತ ಹೆಚ್ಚಿನ ಮಟ್ಟದಲ್ಲಿ ಕಾರ್ಯಕ್ರಮಕ್ಕೆ  ಸಾವಿರಾರು ಫಲಾನುಭವಿಗಳಾದ ಮಹಿಳೆಯರು   ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಕಾರ್ಯಕ್ರಮಕ್ಕೆ  ಪಾಲ್ಗೊಂಡಿದ್ದರು 

ಈ ಸಂಧರ್ಭದಲ್ಲಿ  ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎ.ನಸರುಲ್ಲಾ ,ಕಂದಾಯ ಇಲಾಖೆ ಸಿಬ್ಬಂದಿ ವರ್ಗದವರು ,ಪಟ್ಟಣ ಪಂಚಾಯ್ತಿ ಸದಸ್ಯರು ಹಾಗೂ ಪಟ್ಟಣ ಪಂಚಾಯಿತಿ ಸಿಬ್ಬಂದಿ ವರ್ಗದವರು ಆಶಾ ಕಾರ್ಯಕರ್ತರು ಫಲಾನುಭವಿಗಳ ಸಾವಿರಾರು ಮಹಿಳೆಯರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ