ಗೃಹ ಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ
ಕಾನ ಹೊಸಹಳ್ಳಿ: ರಾಜ್ಯ ಸರಕಾರದ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಲೂರು ಗ್ರಾ.ಪಂ ಸಹಯೋಗದಲ್ಲಿ ಆಲೂರು ಪಂಚಾಯಿತಿಯಲ್ಲಿ ಗೃಹ ಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಲೂರು ಗ್ರಾ.ಪಂ ಅಧ್ಯಕ್ಷೆ ಉಮಾದೇವಿ ಅಂಜಿನಪ್ಪ, ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರಕಾರದ ಐದು ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದ್ದು ಈ ಯೋಜನೆ ಮೂಲಕ ಕುಟುಂಬದ ಮಹಿಳೆಗೆ ತಿಂಗಳಿಗೆ ರೂ.2000 ಹಣ ಸಿಗಲಿದೆ, ಸರಕಾರದ ವತಿಯಿಂದ ಚಾಲನೆ ಆದ ಬಳಿಕ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಆಗಲಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಮಾದೇವಿ ಅಂಜಿನಪ್ಪ, ಉಪಾಧ್ಯಕ್ಷರು ಚೌಡಮ್ಮ ಕರಿಬಸಪ್ಪ, ಪಿಡಿಒ ಮಂಜುನಾಥ, ನೂಡಲ್ ಅಧಿಕಾರಿ ಪ್ರಾಣೇಶ್ ರಾವ್ ಸೇರಿದಂತೆ ಗ್ರಾ.ಪಂ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆರು, ಮಹಿಳಾ ಒಕ್ಕೂಟ ಮತ್ತು ಗೃಹ ಲಕ್ಷ್ಮಿ ಯೋಜನೆಯ ಎಲ್ಲಾ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ