ಕ್ರೀಡೆಯು ಚಿರಾಯುವಾಗಲಿ:ಸಿದ್ದರಾಮ ಕಲ್ಮಠ"
ಕೊಟ್ಟೂರು:ದೈಹಿಕ ಶಿಕ್ಷಣ ವಿಭಾಗದಲ್ಲಿ ಮೇಜರ್ ಧ್ಯಾನ್ ಚಂದ್ ರವರ ಹುಟ್ಟು ಹಬ್ಬವನ್ನು ಮಂಗಳವಾರ ರಂದು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ ಕೇಕ್ ಕಟ್ ಮಾಡುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸಿದ್ದರಾಮ ಕಲ್ಮಠ *ಕ್ರೀಡೆಯು ಚಿರಾಯುವಾಗಲಿ* ಕ್ರೀಡೆಗಳು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮಪಡಿಸುತ್ತವೆ, ಮೊಬೈಲ್ಗಳ ಬಳಕೆಯನ್ನು ಕಡಿಮೆ ಮಾಡಿ ಕ್ರೀಡೆಗಳಲ್ಲಿ ಹೆಚ್ಚು ಆಸಕ್ತಿಯನ್ನು ಬೆಳೆಸಿಕೊಳ್ಳಿಎಂದರು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ ರವಿಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬುವಂತವುಗಳು ಇವು ನಮ್ಮ ದೈನಂದಿನ ಜೀವನದ ಭಾಗವಾಗಿರ ಬೇಕೆಂದರು.
ಇದೇ ಸಂದರ್ಭದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ದಕ್ಷಿಣ ವಲಯ ಮಟ್ಟಕ್ಕೆ ಆಯ್ಕೆಯಾಗಿ ವಿವಿಧ ಕ್ರೀಡಾಗಳಲ್ಲಿ ಭಾಗಿಯಾಗಿ ದ್ದಂತಹ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ಕ್ರೀಡಾಪಟುಗಳು ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟರು.
ಕಾರ್ಯಕ್ರಮದ ಆಯೋಜಕರಾಗಿರುವಂತಹ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾಗಿರುವ ಡಾ. ಶಿವಕುಮಾರ್ ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿ ಗಳನ್ನಾಡಿದರು ಪ್ರಾಸ್ತಾವಿಕ ನುಡಿಗಳ ನಾಡಿದರು ಈ ಸಂದರ್ಭದಲ್ಲಿ ಡಾ. ಜೆ. ಬಿ.ಸಿದ್ದನಗೌಡ ಮತ್ತು ರಾಧಾ ಸ್ವಾಮಿ ಕೆ.ಪಿ ., ಬಸವರಾಜ್ ಬಣಕಾರ್ ಉಪಸ್ಥಿತಿರಿದ್ದರು.
ವಂದನಾರ್ಪಣೆಯನ್ನು ಡಾ. ಪೃಥ್ವಿರಾಜ್ ಸಿ. ಬೆಡ್ಜರ್ಗಿ ನೆರವೇರಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ