ನಾಗರ ಪಂಚಮಿ, ಶ್ರದ್ದಾ ಭಕ್ತಿಯಿಂದ ಪೂಜೆ
ಮಸ್ಕಿ: ಪಟ್ಟಣದ 4ನೇ ವಾರ್ಡ್ ನ ಆಂಜನೇಯ ದೇವಸ್ಥಾನದ ಬಳಿ ನಾಗರಪಂಚಮಿ ಹಬ್ಬದ ಪ್ರಯುಕ್ತ ಭಾನುವಾರ ಬೆಳಿಗ್ಗೆಯಿಂದಲೇ ಜನರು ನಾಗರ ಮೂರ್ತಿಗೆ ಹಾಲೆರೆದು ಪೂಜೆ ಸಲ್ಲಿಸಿ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು.
ಮುದುಗಲ್ ಕ್ರಾಸ್ ಬಳಿಯ ಆಂಜನೇಯ ದೇವಸ್ಥಾನದ ಬಳಿ ನಾಗರ ಪಂಚಮಿಯ ದಿನದಂದು ನಾಗ ದೇವರನ್ನು ಪೂಜಿಸುವುದರಿಂದ ಕಾಳಸರ್ಪ
ದೋಷಗಳಿಂದ ಮುಕ್ತಿ ದೊರೆಯುತ್ತದೆ. ಸರ್ಪ ದೇವರನ್ನು ಮನೆಯ ರಕ್ಷಕ ಎಂಬ ಪ್ರತೀತಿ ಇದೆ. ಪಂಚಮಿ ದಿನ ನಾಗ ದೇವರನ್ನು ಪೂಜಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ. ಅದೇ ಸಮಯದಲ್ಲಿ, ನಿಯಮಗಳು ಮತ್ತು ವಿಧಿವಿಧಾನಗಳ ಮೂಲಕ ಪೂಜೆ ಕೈಂಕರ್ಯಗಳನ್ನು - ಮಾಡುವುದರಿಂದ, ಮಹಾದೇವನು ಪ್ರಸನ್ನನಾಗುತ್ತಾನೆ ಎಂಬ ನಂಬಿಕೆ ಇದೆ. ಇದೇ ಕಾರಣಕ್ಕೆ ಪ್ರತೀ ವರ್ಷವೂ ಶ್ರಾವಣ ಮಾಸದ ಸಂದರ್ಭದಲ್ಲಿ ನಾಗರ ಹುತ್ತಕ್ಕೆ ಅಥವಾ ನಾಗರ ಮೂರ್ತಿಗೆ ಶ್ರದ್ದಾ ಭಕ್ತಿಯಿಂದ ಹಾಲೆರೆದು ಪೂಜೆ ಸಲ್ಲಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ