ಕೊಟ್ಟೂರು ತಾಲೂಕು ಬರಪೀಡಿತ ಪ್ರದೇಶವೆಂದು ಘೋಷಣೆ

ಕೊಟ್ಟೂರು ತಾಲೂಕನ್ನು ತೀವ್ರ ಬರ ಪೀಡಿತ ಎಂದು ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 161 ತಾಲೂಕುಗಳಲ್ಲಿ ಶೇ.73 ರಷ್ಟು ವಾಡಿಕೆಗಿಂತ ಮಳೆ ಕೊರತೆ ಉಂಟಾಗಿದ್ದು, ಸಂಪೂರ್ಣಬೆಳೆ ಹಾನಿ ಉಂಟಾಗಿ ಸರ್ಕಾರ- ಕ್ಕೆ ವರದಿ ಸಲ್ಲಿಸಲಾಗಿತ್ತು. ಈ ನಿಟ್ಟಿನಲ್ಲಿ ಮುಂದಿನ ಆರು ತಿಂಗಳವರೆಗೆ ಬರಪೀಡಿತ ತಾಲೂಕು ಎಂದು ಘೋಷಿಸಿದೆ.

ಮುಂದಿನ ಹಂತದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಪೂರ್ಣವಾಗಿ ಬೆಳೆ ಹಾನಿ ಸಮೀಕ್ಷೆಯನ್ನು ಕೈಗೊಂಡು ವರದಿ ನೀಡಲು ಕಂದಾಯ ಇಲಾಖೆ ಜಂಟಿ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*