ಪೌರ ಕಾರ್ಮಿಕರಿಗೆ ತ್ಯಾಜ್ಯ ವಿಂಗಡಣೆ ಅರಿವು ಅಭಿಯಾನ
ಮಸ್ಕಿ: ತ್ಯಾಜ್ಯ ವಿಂಗಡಣೆ, ಹಸಿ ತ್ಯಾಜ್ಯದಿಂದ ಕಾಂಪೋಸ್ಟ್ ಉತ್ಪಾದನೆ ಹಾಗೂ ಒಣ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಮಾಹಿತಿ ಕಾರ್ಯಕ್ರಮವನ್ನು ಪುರಸಭೆಯಿಂದ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ಈ ವೇಳೆ ಗದ್ದೆಪ್ಪ ಕಿರಿಯ ಆರೋಗ್ಯ ಸಹಾಯಕ ಮಾತನಾಡಿ, ಮಿಷನ್ ನಗರ 2.0 ಯೋಜನೆ ಅಡಿ ಮನೆ ಮತ್ತು ಮಸ್ಕಿ ಪಟ್ಟಣದ ತ್ಯಾಜ್ಯ ನಿರ್ವಹಣಾ ಪದ್ಧತಿಗಳು ಪ್ರಾಮುಖ್ಯತೆಯನ್ನು ಪರಿಗಣಿಸಿ ಮೂಲದಲ್ಲಿಯೇ ಪ್ರತ್ಯೇಕವಾಗಿ ತ್ಯಾಜ್ಯವನ್ನು ವಿಂಗಡಿಸುವುದು ಮತ್ತು ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿಕೆ ಮತ್ತು ಒಣ ತ್ಯಾಜ್ಯ ಸಂಗ್ರಹಣ ಕೇಂದ್ರಗಳಲ್ಲಿ ಪ್ರತ್ಯೇಕವಾಗಿ ಸಂಗ್ರಹಿಸುವುದು ಅಭಿಯಾನದ ಮುಖ್ಯ ಉದ್ದೇಶ ವಾಗಿದೆ ಎಂದು ತಿಳಿಸಿದರು.
ಈ ತ್ರ್ಯಮಾಸಿಕ ಅಭಿಯಾನದ ಮೂಲಕ ಸಾರ್ವಜನಿಕರ ಮೇಲೆ ಪ್ರಭಾವ ಬೀರುವಲ್ಲಿ ಪುರಸಭೆ ಪ್ರಮುಖ ಪಾತ್ರ ವಹಿಸುತ್ತದೆ. ಪಟ್ಟಣದ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಲು ಉತ್ತೇಜಿಸುವ ಮೂಲಕ ಸುಸ್ಥಿರ ಮೂಲ ಸೌಕರ್ಯಗಳ ಅಭಿವೃದ್ಧಿಯನ್ನು ಪ್ರೋತ್ಸಾಹಿಸಲು ಹಾಗೂ ಪರಿಸರಸ್ನೇಹಿ ಪ್ಯಾಕೇಜಿಂಗ್ ಮತ್ತು ಸಾಮಗ್ರಿಗಳ ಬಳಕೆಯನ್ನು ಉತ್ತೇಜಿಸಲು ಮಸ್ಕಿ ಪುರಸಭೆ ವತಿಯಿಂದ ಪ್ಲಾಸ್ಟಿಕ್ ಮುಕ್ತ ಅಭಿಯಾನ ಕೂಡ ಈ ಹಿಂದೆ ಕೈಗೊಳ್ಳಲಾಗಿತ್ತು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯ ಅಧಿಕಾರಿ ನರಸ ರೆಡ್ಡಿ ನೇತೃತ್ವದಲ್ಲಿ, ಗದ್ದೆಪ್ಪ ಕಿರಿಯ ಆರೋಗ್ಯ ನಿರೀಕ್ಷಕರು, ಸೋಮನಾಥ್ ಹಿರಿಯ ಆರೋಗ್ಯ ನಿರೀಕ್ಷಕರು, ಪುರಸಭೆಯ ಅಧಿಕಾರಿಗಳಾದ ಸುನಿಲ್, ಅಜರ, ಹಾಗೂ ಪುರಸಭೆಯ ಪೌರಕಾರ್ಮಿಕರು ಮತ್ತು ಚಾಲಕರು ಭಾಗಿಯಾಗಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ