ಏಮ್ಸ್ ಹೋರಾಟ ಸಮಿತಿ ವತಿಯಿಂದ ಪ್ರಧಾನ ಮಂತ್ರಿಗಳಿಗೆ ಮನವಿ

ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಏಮ್ಸ್ ಹೋರಾಟ ಸಮಿತಿ ವತಿಯಿಂದ ರಾಯಚೂರಿಗೆ ಏಮ್ಸ್ ವೈದ್ಯಕೀಯ ಸಂಸ್ಥೆಯನ್ನು ಮಂಜೂರು ಮಾಡುವಂತೆ ಒತ್ತಾಯಿಸಿ ಪ್ರಧಾನ ಮಂತ್ರಿಗಳಿಗೆ ಉಪತಹಸೀಲ್ದಾರ್ ವಿನಾಯಕರಾವ್ ಮೂಲಕ ಮನವಿ ಸಲ್ಲಿಸಿ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಮಾತನಾಡಿ ರಾಜ್ಯದಲ್ಲಿ ಅತ್ಯಂತ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ರಾಯಚೂರು ಜಿಲ್ಲೆಗೆ ಏಮ್ಸ್ ವೈದ್ಯಕೀಯ ಸಂಸ್ಥೆಯನ್ನು ಮಂಜೂರು ಮಾಡುವುದರಿಂದ ಈ ಭಾಗದಲ್ಲಿನ ಬಡ ರೋಗಿಗಳಿಗೆ ಉತ್ತಮ ವೈದ್ಯಾಕೀಯ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತದೆ ಎನ್ನುವ ಉದ್ದೇಶದಿಂದ ರಾಜ್ಯದ ಮುಖ್ಯಮಂತ್ರಿಗಳು ೨ ಬಾರಿ ಕೇಂದ್ರಸರಕಾರಕ್ಕೆ ಪತ್ರವನ್ನು ಕೂಡ ಬರೆದಿದ್ದಾರೆ. ಕಳೆದ ೫೦೦ ದಿನಗಳಿಂದ ಏಮ್ಸ್ ಗಾಗಿ ಹೋರಾಟ ನಡೆಸಲಾಗುತ್ತಿದೆ ಐ.ಐ.ಟಿ ಕಾಲೇಜ ಸ್ಥಾಪನೆಯಲ್ಲಿ ಆದ ಅನ್ಯಾಯವನ್ನು ಸರಿಪಡಿಸಿ ರಾಯಚೂರಿಗೆ ಏಮ್ಸ್ ಮಂಜೂರು ಮಾಡುವಂತೆ ಒತ್ತಾಯಿಸಿದರು.

ಪಟ್ಟಣದ ಬಸವ ವೃತ್ತದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನ ಮೆರವಾಣಿಗೆ ನಡೆಸಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಸರ್ವೋದಯ ಪ್ಯಾರ ಮೇಡಿಕಲ್ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

ತಾ.ಸಂಚಾಲಕ ಹೆಚ್.ಶರ್ಪುದ್ದೀನ್ ಪೋತ್ನಾಳ್,ಮನೋಜ್ ಕುಮಾರ ಮಿಶ್ರಾ, ರಾಜು ತಾಳಿಕೋಟೆ, ರಾಜಾ ಸುಭಾಸ ಚಂದ್ರನಾಯಕ,ಆನಿಲ್ ಕುಮಾರ, ಸೈಯಾದ್ ಅಹ್ಮದ್ ಹುಸೇನಿ ಮತವಾಲ್,ಭೀಮರಾಯ ನಿತಿಮನಿ,ಎಂ.ಡಿ.ಹಾರೂನ್, ಮಹಾಂತೇಶ ಓಲೇಕಾರ್,ಶೇಖ್‌ಫರಿದ್‌ಉಮ್ರಿ,ಶೇಖ ಬಾಬಾ ಹುಸೇನ್,ಸೇರಿದಂತೆ ಇನ್ನಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ