ಬಾರದ ಮಳೆ; ಶೇಂಗಾ ಬೆಳೆ ರಕ್ಷಣೆಗೆ ರೈತರಿಂದ ಟ್ಯಾಂಕರ್ ನೀರು ಬಳಕೆ

ಕಾನ ಹೊಸಹಳ್ಳಿ: ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್ ಮೊದಲನೇ ವಾರದಲ್ಲಿ ಪ್ರಾರಂಭವಾಗಿ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು. ಪ್ರಸ್ತುತ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಮುಂಗಾರು ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ಮಂದಗತಿಯಲ್ಲಿ ಸಾಗುತ್ತಿವೆ. ಇದೀಗ ಉಳಿದಿರುವ ಅಲ್ಪಸ್ವಲ್ಪ ಬೆಳೆಗಳ ಉಳಿಸಲು ತಾಲೂಕಿನ ಗುಡೆಕೋಟೆ ಹೋಬಳಿ ವ್ಯಾಪ್ತಿಯ ರಾಮಸಾಗರ ಹಟ್ಟಿ ಗ್ರಾಮದ ರೈತ ಎ.ಕೆ ತಿಪ್ಪಯ್ಯ ರೈತ 3 ಎಕ್ಟರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ ಶೇಂಗಕ್ಕೆ ಪಕ್ಕದ ನೀರಾವರಿ ಅಕ್ಕಪಕ್ಕದವರ ಜಮೀನಿನಲ್ಲಿ ನೀರಿನ ಟ್ಯಾಂಕರ್ ಗಳ ಖರೀದಿಸಿ, ತಮ್ಮ ಕುಟುಂಬದೊಂದಿಗೆ ಬೆಳೆಗಳಿಗೆ ನೀರುಣಿಸುತ್ತಿದ್ದಾನೆ. ಈ ಭಾಗದ ಜೋಳ, ಮೆಕ್ಕೆಜೋಳ, ರಾಗಿ, ಸಜ್ಜಿ, ಶೇಂಗಾ ಬೆಳೆಗಳನ್ನು ಬಿತ್ತನೆ ಮಾಡಿದ್ದು, ತಿಂಗಳಿನಿಂದ ಮಳೆ ಬಾರದೇ ಇರುವುದರಿಂದ ಬೆಳೆಗಳಿಗೆ ನೀರಿನ ಅಭಾವತೆ ಎದುರಾಗಿದೆ. ಇದರಿಂದ ಬೆಳೆಗಳು ಒಣಗುವ ಹಂತಕ್ಕೆ ಸಾಗಿದೆ. ಹೀಗಾಗಿ ರೈತರು ನೀರಿನ ಟ್ಯಾಂಕರ್ ಗಳ ಖರೀದಿಸಿ, ಬೆಳೆಗಳಿಗೆ ನೀರುಣಿಸುತ್ತಿದ್ದಾರೆ. ತಾಲೂಕಿನ ಸಾಲ ಶೂಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಸ್ಥಿತಿಗೆ ಬಂದಿದ್ದಾನೆ.

ನೀರಿಲ್ಲದೆ ಒಣಗುತ್ತಿರುವ ಬೆಳೆಗಳು: ಇನ್ನೂ ಜೂನ್‌ನಿಂದ ಆರಂಭಗೊಳ್ಳುವ ಮುಂಗಾರು ಮಳೆ ಸೆಪ್ಟೆಂಬರ್‌ವರೆಗೆ ಸುರಿಯುತ್ತದೆ. ಜೂನ್, ಜುಲೈನಲ್ಲಿ ಅಲ್ಪಸ್ವಲ್ಪ ಮಳೆ ಸುರಿದಿದ್ದು ಬಿಟ್ಟರೆ ಮೋಡಗಳ ಚೆಲ್ಲಾಟ ಮಾತ್ರ ಕಣ್ಣಿಗೆ ಕಟ್ಟುತ್ತಿದೆ. ಹವಾಮಾನ ಇಲಾಖೆ ಪ್ರಕಾರ ಇನ್ನು ಹದಿನೈದು ದಿನಗಳಲ್ಲಿ ಮಳೆಯಾಗಬೇಕು. ವರುಣ ಕೃಪೆ ತೋರದಿದ್ದರೆ ರೈತರು ಹದಗೊಳಿಸಿದ ಭೂಮಿಯಲ್ಲಿ ಬೆಳೆ ಕಾಣಲು ಸಾಧ್ಯವಿಲ್ಲ. ಬಾಡಿದ ಬೆಳೆ ತಾಲೂಕಿನಲ್ಲಿ ಬಿತ್ತನೆ ಕೈಗೊಂಡಿದ್ದ ಸಜ್ಜೆ, ಮೆಕ್ಕೆಜೋಳ ಹಾಗೂ ಸೂರ್ಯಕಾಂತಿ ಬೆಳೆಗಳು ನೀರಿಲ್ಲದೇ ಒಣಗುತ್ತಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ