ಅರ್ಥಪೂರ್ಣ ವಾಗಿ ದಿ ಬೆಸ್ಟ್ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಮಸ್ಕಿ : ಡಾ.ಎಸ್.ರಾಧಾಕೃಷ್ಣನ್ ಶಿಕ್ಷಕ, ಉಪನ್ಯಾಸಕ, ಪ್ರಾಧ್ಯಾಪಕ, ತತ್ವಜ್ಞಾನಿ, ದಾರ್ಶನಿಕರಾಗಿ ಉಪ ರಾಷ್ಟ್ರಪತಿ ಹಾಗೂ ರಾಷ್ಟ್ರಪತಿಯಾಗಿ ದೇಶದ ಅಭ್ಯುದಯಕ್ಕಾಗಿ ಶ್ರಮಿಸಿದ ಮಹಾನ ಚೇತನವಾಗಿದ್ದರು ವಿದ್ಯಾರ್ಥಿಗಳು ಡಾ.ಎಸ್.ರಾಧಾಕೃಷ್ಣನ್ ಅವರ ಆದರ್ಶಗುಣಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳ ಬೇಕು ಎಂದು ಸಿದ್ದು  ತಿಳಿಸಿದರು.

ತಾಲ್ಲೂಕಿನ ಹಾಲಾಪೂರ ಗ್ರಾಮದ ದಿ ಬೆಸ್ಟ್ ಪಬ್ಲಿಕ್ ಶಾಲೆಯಲ್ಲಿ 

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿ ಅನಾದಿ ಕಾಲದಿಂದ ನಾವುಗಳು ಶಿಕ್ಷಕರನ್ನು ಗುರುಗಳ ಸ್ಥಾನದಲ್ಲಿ ನೋಡುತ್ತಾ ಬಂದಿದ್ದೇವೆ. ಮುಗ್ಧ ಮುಗುವಿನ ಮನಸ್ಸು ಅರ್ಥ ಮಾಡಿಕೊಂಡು ಆತನಿಗೆ ಶಿಕ್ಷಣ ನೀಡುವ ಹೊಣೆಗಾರಿಕೆ ಶಿಕ್ಷಕರಲ್ಲಿ 

ಇದೆ. ಭಾರತದ ಶಿಕ್ಷಣಕ್ಕೆ ಮಾರು ಹೋದ ವಿದೇಶದವರು ನಮ್ಮಲ್ಲಿಗೆ ಬಂದು ಉನ್ನತ ವ್ಯಾಸಂಗ ಮಾಡುತ್ತಿದ್ದು, ಈ ಬೆಳವಣಿಗೆ ಶಿಕ್ಷಕರ ಕುಲಕ್ಕೆ ಆದರ್ಶ ಪ್ರಾಯವಾಗಿದೆ ಎಂದರು.

ಈ ಸಂದರ್ಭದಲ್ಲಿ, ಸಂಸ್ಥೆಯ ಅಧ್ಯಕ್ಷ ಗದ್ದೆಪ್ಪ,ಮುಖ್ಯ ಗುರುಗಳಾದ ರವಿಕುಮಾರ್, ಕುಮಾರ,ಕೃಷ್ಣ,ಹಾಗೂ ಶಿಕ್ಷಕರು ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*