ಯುವ ಸಮೂಹ ಉತ್ತಮ ಗುರಿಯೊಂದಿಗೆ ಮುನ್ನೆಡೆಯಿರಿ: ಶಾಸಕ ಡಾ ಶ್ರೀನಿವಾಸ್
ಕಾನ ಹೊಸಹಳ್ಳಿ: ಜ್ಞಾನ ಸಂಪಾದನೆಯೇ ಬದುಕಿಗೆ ಆಸರೆ. ವಿದ್ಯಾರ್ಥಿ ಜೀವನದಲ್ಲಿ ಉತ್ತಮ ಭವಿಷ್ಯದ ಗುರಿ ಇಟ್ಟುಕೊಳ್ಳುವ ಮೂಲಕ ಮುನ್ನೆಡೆಯಬೇಕು ಎಂದು ಶಾಸಕ ಡಾ ಎನ್.ಟಿ ಶ್ರೀನಿವಾಸ್ ಸಲಹೆ ನೀಡಿದರು. ಸಮೀಪದ ಚಿಕ್ಕಜೋಗಿಹಳ್ಳಿ ಗ್ರಾಮದ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದಿನ ಘನ ಸರಕಾರ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಜವಾಹರ ನವೋದಯ ವಿದ್ಯಾಲಯ ಶಿಕ್ಷಣ ಸಂಸ್ಥೆಗಳನ್ನು ರಾಷ್ಟ್ರ ಮಟ್ಟದಲ್ಲಿ ಳ ಹುಟ್ಟು ಹಾಕಲಾಯಿತು. ಇಲ್ಲಿನ ಬಹುತೇಕ ವಿದ್ಯಾರ್ಥಿಗಳು ಹಳ್ಳಿಯಿಂದ ಬಂದ ಪ್ರತಿಭಾವಂತರನ್ನು ಕಂಡು ಹೆಮ್ಮೆ ಅನಿಸುತ್ತದೆ. ಇಲ್ಲಿ ಶಿಕ್ಷಣ ಪಡೆದ ಬಹುತೇಕರು ದೇಶದ ವಿವಿಧ ಮೂಲೆಯಲ್ಲಿ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳಾದ ನೀವು ತನ್ನದೇ ಆದ ಗುರಿ ಇಟ್ಟುಕೊಳ್ಳುವ ಮೂಲಕ ಸಾಧನೆ ಮಾಡಿ ದೊಡ್ಡ ವ್ಯಕ್ತಿಗಳಾಗಬೇಕು ಎಂದೂ ಹೇಳಿದರು. ಹಾಗೆಯೇ ಮುಂದಿನ ದಿನಗಳಲ್ಲಿ ಚಿಕ್ಕಜೋಗಿಹಳ್ಳಿ ಗ್ರಾಮದ ಜವಾಹರ ನವೋದಯ ವಿದ್ಯಾಲಯ ಅಭಿವೃದ್ಧಿ ಗಾಗಿ ಸದಾಕಾಲವೂ ಶ್ರಮಿಸುವೆ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರವೀಂದ್ರನಾಥ ಬಾಬು, ಪ್ರಾಂಶುಪಾಲರು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು, ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಕನ್ನಡ ವಿಶ್ವವಿದ್ಯಾಲಯದ ಚಿತ್ರಕಲಾ ಮತ್ತು ಸಂಗೀತ ವಿಭಾಗದ ಪ್ರಾಧ್ಯಾಪಕರು, ಸ್ಥಳೀಯ ಪ್ರತಿನಿಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ