ಸಂವಿಧಾನ ಪೂರ್ವ ಪೀಠಿಕೆ ಸಭೆ ಯಶಸ್ವಿ
ಮಸ್ಕಿ : ಬಸವೇಶ್ವರ ನಗರದ ತಹಶೀಲ್ ಕಛೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.
ಈ ಕುರಿತು ತಹಶೀಲ್ದಾರರು ಮಾತನಾಡಿ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಶುಕ್ರವಾರದಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಣೆ ಮಾಡಿ, ಸಂವಿಧಾನದ ಪೀಠಿಕೆಯನ್ನು ವಾಚನೆ ಮಾಡಲು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ತಾಲ್ಲೂಕ ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಕೇಂದ್ರ ಶಾಲೆ ಮಸ್ಕಿ ಆವರಣದಲ್ಲಿ ಬೆಳಿಗ್ಗೆ 09-00 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದಲ್ಲಿ ಎಲ್ಲಾ ಅಧಿಕಾರಿಗಳು, ನೌಕರರು, ಹಿರಿಯ ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು ಸಾರ್ವಜನಿಕರು ಹಾಗೂ ಪತ್ರಿಕಾ ವರದಿಗಾರರು ಪಾಲ್ಗೊಂಡು ಸಂವಿಧಾನ ಪೀಠಿಕೆ ವಾಚನ ಮಾಡುವ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕರು ದೇವರಾಜ, ಆರಕ್ಷಕ ವೃತ್ತ ನಿರೀಕ್ಷಕರಾದ ಬಾಲಚಂದ್ರ ಲಕ್ಕಂ ವಿವಿಧ ಇಲಾಖೆಯ ಅಧಿಕಾರಿಗಳು ದಲಿತ ಮುಖಂಡರು ವಿವಿಧ ಸಂಘಟನೆಯ ಅಧ್ಯಕ್ಷರೂ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ