*ಶಿಕ್ಷಕರ ವೃತ್ತಿ ಶ್ರೇಷ್ಠ ವೃತ್ತಿ: ಲಕ್ಷ್ಮಣ ಕರ್ಲಿ*

ಮಸ್ಕಿ: ಶಿಕ್ಷಕ ವೃತ್ತಿಯಂತಹ ಶ್ರೇಷ್ಠ ವೃತ್ತಿ ಮತ್ತೊಂದಿಲ್ಲ ಶಿಕ್ಷಕ ವೃತ್ತಿಯಲ್ಲಿತ್ಯಾಗ ಮನೋಭಾವನೆ ಬೇಕು, ಅದರಿಂದ ಮಾತ್ರ ಸಮಾಜ ಸಮೃದ್ಧಿ ಹಾಗೂ ಸುಧಾರಣೆಯಾಗಲಿದೆ. ಜ್ಞಾನದ ಹಸಿವನ್ನು ಇಂಗಿಸುವ ಪರಮೋಚ್ಚ ಶಕ್ತಿ ಶಿಕ್ಷಕರಲ್ಲಿದ್ದು ತಮ್ಮ ಜವಾಬ್ದಾರಿಯನ್ನು ಅರಿತು ನಡೆದುಕೊಳ್ಳಬೇಕಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ ಹೇಳಿದರು.

ಸ್ಥಳೀಯ ವೀರರಾಣಿ ಕಿತ್ತೂರು ಚನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

           ಉತ್ತಮ ಸಂಸ್ಕಾರಯುತ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ ದೇಶದ ಅಭ್ಯುದಯಕ್ಕೆಅಡಿಪಾಯ ಹಾಕುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಇಡೀ ದೇಶ ತಮ್ಮ ಮೇಲೆ ಬಹಳಷ್ಟು ನಿರೀಕ್ಷೆಯನ್ನಿಟ್ಟಿದ್ದು ತಮ್ಮ ಕಾರ್ಯ ವೈಖರಿಯನ್ನು ಅವಲೋಕಿಸುತ್ತಿದೆ ಗುರುವಿನ ಸ್ಥಾನಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳಿ ಎಂದು ಹೇಳಿದರು.

  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಪಿ.ರಾಮು ಮಾತನಾಡಿ ತಂತ್ರಜ್ಞಾನ ಬೆಳೆದಂತೆಲ್ಲ ಮಕ್ಕಳ ಮನಸ್ಸು ವಿಚಲಿತಗೊಂಡು ಮಲೀನವಾಗುತ್ತಿರುವುದು ದುರಂತ ವಿಷಯ ಇಂತಹ ಸಂದರ್ಭದಲ್ಲಿ ಮಕ್ಕಳನ್ನು ತಿದ್ದಿ ದೇಶದ ಶಕ್ತಿಯನ್ನಾಗಿಸಿ ಪರಿವರ್ತನೆ ಮಾಡುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯೋನ್ಮುಖರಾಗಬೇಕಿದೆ ಎಂದರು.             

           ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಹುಸೇನ್ ಬಾಷಾ,ಶರಣಬಸವ ಗೋನಾಳ, ಎಮ್ ಡಿ ಯುಸುಪ್,ಪರಮೇಶ, ಬನಶ್ರೀ ಹಾಗೂ ವಿದ್ಯಾರ್ಥಿಗಳಾದ ಮಾನಮ್ಮ,ಮುಸ್ಕಾನ, ಅಮರೇಶ ಹಾಗೂ ಶಿವಬಸವ ಕಾರ್ಯಕ್ರಮದ ಕುರಿತು ಅನಿಸಿಕೆ ವ್ಯಕ್ತ ಪಡಿಸಿದರು. ಪವಿತ್ರ ಮತ್ತು ಸಂಗಡಿಗರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು ವಿದ್ಯಾರ್ಥಿನಿ ಭಾಗಿರಥಿ ಕಾರ್ಯಕ್ರಮ ನಿರೂಪಿಸಿದರೆ,ಶ್ರೀ ಶೈಲ ಸ್ವಾಗತಿಸಿ, ತಾಯಮ್ಮ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ