"ಗಣೇಶ ಹಬ್ಬದ ಪ್ರಯುಕ್ತ ಕೊಟ್ಟೂರಿನಲ್ಲಿ ಪೊಲೀಸ್ ಪಥ ಸಂಚಲನ"


ಕೊಟ್ಟೂರು: ಗಣೇಶ ಹಬ್ಬದ ಪ್ರಯುಕ್ತ ವಿಶೇಷವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆವರೆಗೂ ಕಟ್ಟೆಚ್ಚರ ಮುಂದುವರಿಯುತ್ತದೆ ಎಂದು ಪಿಎಸ್‌ಐ ಹಾಗೂ ಸಿಪಿಐ ಹೇಳಿದ್ದಾರೆ.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಂತರ ಮಾತನಾಡಿದ ಅವರು ಅದ್ದೂರಿಯಾಗಿ ಈ ವರ್ಷ ವಿಜೃಂಭಣೆಯಿಂದ ನಡೆಯುವದರಿಂದ ಶಾಂತಿ ಸುವ್ಯವಸ್ಥೆಗೆ ಯಾರಿಂದಲೂ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.

ಕಾನೂನು ಉಲ್ಲಂಘನೆ ಮಾಡಿದರೆ ಕ್ರಮ ಕೈಗೊಳ್ಳಲೂ ಇಲಾಖೆ ಹಿಂಜರಿಯುವುದಿಲ್ಲವೆಂದು ಎಚ್ಚರಿಸಿದ ಅವರು, ಕಿಡಿಗೇಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡುವ ಸಲುವಾಗಿ ಪ್ರತ್ಯೇಕ ಪೊಲೀಸ್ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗಿದೆ. ಸಾರ್ವಜನಿಕರಲ್ಲಿ ವಿಶ್ವಾಸವನ್ನು ಮೂಡಿಸುವ ಸಲುವಾಗಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಲಾಗಿದೆ.

ಈ ಸಂಧರ್ಭದಲ್ಲಿ ಕೊಟ್ಟೂರು ಸಿಪಿಐ ವೆಂಕಟಸ್ವಾಮಿ ,ಪಿಎಸ್ಐ ಗೀತಾಂಜಲಿ ಶಿಂಧೆ ಠಾಣೆಯ ನೇತೃತ್ವದಲ್ಲಿ ತುರ್ತ ಪಡೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ