ಕೊಟ್ಟೂರೇಶ್ವರ ಮಹಾವಿದ್ಯಾಲಯದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ
ಕೊಟ್ಟೂರು ಕೊಟ್ಟೂರೇಶ್ವರ ಮಹಾವಿದ್ಯಾಲಯ ದಿನಾಂಕ 17 /9 /2023 ಭಾನುವಾರದಂದು ಕಲ್ಯಾಣ ಕರ್ನಾಟಕ ಉತ್ಸವ ಅಥವಾ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜ್ ಆಡಳಿತ ಮಂಡಳಿಯ ಗೌರವಾನ್ವಿತ ಅಧ್ಯಕ್ಷರಾದಂತಹ ಶ್ರೀ ಸಿದ್ದರಾಮ ಕಲ್ಮಠ ಕಲ್ಯಾಣ ಕರ್ನಾಟಕ ಅಥವಾ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯ ಇಂದು ಅಮೃತ ಮಹೋತ್ಸವವನ್ನು ಆಚರಿಸಲಾಗುತ್ತದೆ . ಹಾಗಾಗಿ ಹೈದರಾಬಾದ್ ಕರ್ನಾಟಕದ ವಿಮೋಚನೆಗೆ ಅನೇಕ ಮಹನೀರನ್ನು ಸ್ಮರಿಸಿ ಐತಿಹಾಸಿಕ ವಿಷಯಗಳನ್ನು ಪ್ರಸ್ತುತಪಡಿಸಿದರು.ಇಂದಿನ ಸರ್ಕಾರಗಳು 75 ವರ್ಷಗಳಾದರೂ ಇಲ್ಲಿನ ಶಿಕ್ಷಣ ಉದ್ಯೋಗಾವಕಾಶಗಳು ಮತ್ತಿತರ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸಿ ಕಲ್ಯಾಣ ಕರ್ನಾಟಕ ಅನ್ನುವ ಪದಕ್ಕೆ ನಿಜವಾದ ಅರ್ಥ ಸಿಗುತ್ತದೆ . ಕಲ್ಯಾಣ ಕರ್ನಾಟಕ ಭಾಗದ ಜನರು ಮುಖ್ಯ ವಾಹಿನಿಗೆ ಬರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ನುಡಿದಂತಹ ಡಾ. ಎಂ.ರವಿಕುಮಾರ್ ಮಾತನಾಡಿ ಹೈದರಾಬಾದ್ ಕರ್ನಾಟಕದ ವಿಮೋಚನಾ ದಿನಾಚರಣೆಯ ಅನೇಕ ಇತಿಹಾಸದ ಘಟನೆಗಳನ್ನು ಸವಿಸ್ತಾರವಾಗಿ ನುಡಿದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ.ಶಿವಕುಮಾರ್ ವಿದ್ಯಾರ್ಥಿಗಳು ಇಂದು ಉನ್ನತ ಮೌಲ್ಯಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಕೀರ್ತಿ ತರಬೇಕು ಎಂದು ಹೇಳಿದರು ಹಾಗೂ ಈ ಕಾರ್ಯಕ್ರಮದಲ್ಲಿ ಪದವಿಪೂರ್ವ ಪ್ರಾಚಾರ್ಯರಾದ ಪ್ರಶಾಂತ್ ಕುಮಾರ್ ಎಂ ಹೆಚ್ ರವರು ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ಅಡಿಕೆ ಮಂಜುನಾಥಯ್ಯ, ಕೋರಿ ಶೆಟ್ಟರ್ ಬಸವರಾಜ, ಕೆಬಿ ಮಲ್ಲಿಕಾರ್ಜುನ, ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಸಮಸ್ತ ಬೋಧಕ ಬೋಧಕರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ