ಕೊಟ್ಟೂರು ತಾಲೂಕಿನ ಹ್ಯಾಳ್ಯಾ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

ಕೊಟ್ಟೂರು ತಾಲ್ಲೂಕಿನ ಹ್ಯಾಳ್ಯಾ ಗ್ರಾಮ ಪಂಚಾಯಿತಿಗೆ ಈ ವರ್ಷ ಗಾಂಧಿ ಗ್ರಾಮ ಪುರಸ್ಕಾರ ಸಂದಿದೆ. ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರು ಹ್ಯಾಳ್ಯಾ ಗ್ರಾಮ ಪಂಚಾಯಿತಿಯ ಆಡಳಿತ ವೈಖರಿಯನ್ನು ಗಮನಿಸಿ ಪುರಸ್ಕಾರದ ಆದೇಶ ಹೊರಡಿಸಿದ್ದಾರೆ. ನರೇಗಾ ಯೋಜನೆಯ ಅನುಷ್ಠಾನ, ೧೫ನೇ ಹಣಕಾಸು ಯೋಜನೆಯ ಅನುಷ್ಠಾನ, ಗ್ರಾಮ ಪಂಚಾಯಿತಿಯ ಕಾರ್ಯವೈಖರಿ, ಸಾಮಾನ್ಯ ಸಭೆ, ಗ್ರಾಮ ಸಭೆಗಳಲ್ಲಿ ಚರ್ಚಿಸಲಾದ ವಿಷಯಗಳ ಅನುಷ್ಠಾನ, ಆಯ-ವ್ಯಯದ ಅನುಷ್ಠಾನ, ೫೩, ೫೫, ೫೬ ನಮೂನೆಗಳ ನಿರ್ವಹಣೆ, ನರೇಗಾ ದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ, ಉದ್ಯೋಗ ಖಾತ್ರಿಯಲ್ಲಿ ಹೆಚ್ಚು ಮಾನವ ದಿನಗಳನ್ನು ಅನುಷ್ಠಾನಗೊಳಿಸಿರುವುದು, ಮೂಲಭೂತ ಸೌಕರ್ಯಗಳ ಅನುಷ್ಠಾನ ಈ ಎಲ್ಲ ಮಾನದಂಡಗಳನ್ನು ಪರಿಶೀಲಿಸಿ ಹ್ಯಾಳ್ಯಾ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ  ಪ್ರಭಾರಿ ಪಿ.ಡಿ.ಒ. ಗಂಗಾಧರ ಮಾತನಾಡಿ, ಈ ಸಲ ಗಾಂಧಿ ಪುರಸ್ಕಾರ ನಮ್ಮ ಹ್ಯಾಳ್ಯಾ ಗ್ರಾಮ ಪಂಚಾಯಿತಿ ಆಯ್ಕೆಯಾಗಿರುವುದು ತುಂಬಾ ಸಂತೋಷವಾಗಿದೆ. ಈ ಪುರಸ್ಕಾರ ಬಂದಿರುವುದರಿಂದ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದೆ. ಈ ರೀತಿಯ ಪ್ರೋತ್ಸಾಹಗಳು ಬರುವುದರಿಂದ ಕ್ರಿಯಾಶೀಲತೆಯಿಂದ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ