"ಅಧ್ಯಯನ ತಂಡ ಜಿಲ್ಲಾಯ ಬರ ಪ್ರದೇಶಗಳಿಗೆ ಭೇಟಿ "
ಕೊಟ್ಟೂರು: ವಿಜಯನಗರ ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನಕ್ಕೆ ಐಎಎಸ್ ಅಧಿಕಾರಿಗಳನ್ನು ಒಳಗೊಂಡ ಕೇಂದ್ರದ ಎರಡನೇ ತಂಡ ಶನಿವಾರ ರಂದು ಜಿಲ್ಲೆಗೆ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ದಿವಾಕರ್ ಎಂ.ಎಸ್. ತಿಳಿಸಿದ್ದಾರೆ.
ಕೇಂದ್ರ ತಂಡ ಹತ್ತು ಸದಸ್ಯರನ್ನೊಳಗೊಂಡಿದ್ದು, ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗಿದ್ದು, ಬರ ಅಧ್ಯಯನದ ಎರಡನೇ ತಂಡವಾದ ಕೇಂದ್ರ ಕುಡಿಯುವ ನೀರು ಹಾಗೂ ಸ್ವಚ್ಛತಾ ಸಚಿವಾಲಯದ ಹೆಚ್ಚುವರಿ ಸಲಹೆಗಾರ ಡಿ. ರಾಜಶೇಖರ್ ನೇತೃತ್ವದಲ್ಲಿ ಪಶುಸಂಗೋಪನೆ ಇಲಾಖೆ ನಿರ್ದೇಶಕ ಆರ್.ಥಾಕರೆ, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತ ಮೋತಿರಾಂ, ರಾಜ್ಯದ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕ ಕರೀಗೌಡ ಅವರ ನೇತೃತ್ವದ ತಂಡ ವಿವಿಧ ತಾಲೂಕಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಿದೆ ಎಂದು ಹೇಳಿದ್ದಾರೆ.
ವಿಜಯನಗರ ಜಿಲ್ಲಾ ಬರ ಪ್ರದೇಶಗಳಿಗೆ ಅಧ್ಯಯನ ತಂಡ ಭೇಟಿ
ಜಿಲ್ಲೆಯಲ್ಲಿ ನಿಗದಿಯಾದ ಪ್ರದೇಶಗಳಲ್ಲಿ ತಂಡದ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ.
ಅ.7 ರಂದು ಶನಿವಾರ ಕಮಲಾಪುರದ ಮಯೂರ ಭುವನೇಶ್ವರಿ ಹೋಟೆಲಿನಲ್ಲಿ ಬರ ಪರಿಸ್ಥಿತಿಯ ಸಂಕ್ಷಿಪ್ತ ವಿವರ ಪಡೆದು ಆಯಾ ಪ್ರದೇಶಗಳಿಗೆ ತಂಡ ಭೇಟಿ ನೀಡಲಿದೆ.
ಹೊಸಪೇಟೆ ತಾಲೂಕಿನ ನಂದಿಬಂಡಿ ಗ್ರಾಮ ಸೇರಿದಂತೆ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ, ಹಂಪಾಪಟ್ಟಣ, ರಾಯರ ತಾಂಡಾ, ಆನೆಕಲ್, ಮಾದೂರು, ಕೊಟ್ಟೂರು ತಾಲೂಕಿನ ತಿಮ್ಮಲಾಪುರ ನಂತರ ಕೂಡ್ಲಿಗಿ ತಾಲೂಕಿನ ಈಚಲುಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಬರ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ರೈತರೊಂದಿಗೆ ಮಾತುಕತೆ ಮಾಡಲಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ