ವಿಶೇಷ ನೋಂದಣಿ ಅಭಿಯಾನಕ್ಕೆ ತಹಸೀಲ್ದಾರ್ ರಿಂದ ಚಾಲನೆ
ಮಾನ್ವಿ: ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಈಶಾನ್ಯ ಪದವೀಧರ ಮತಕ್ಷೇತ್ರದ ಚುನಾವಣೆ ೨೦೨೪ ಅಂಗವಾಗಿ ಮತದಾರರ ವಿಶೇಷ ನೋಂದಣಿ ಅಭಿಯಾನಕ್ಕೆ ತಹಸೀಲ್ದಾರ್ ರಾಜು ಪಿರಂಗಿ ಚಾಲನೆ ನೀಡಿ ಮಾತನಾಡಿ ಪದವಿಧಾರ ಕ್ಷೇತ್ರದ ಪ್ರತಿನಿಧಿಗಳ ಆಯ್ಕೆಗಾಗಿ ಮತದಾನದ ಹಕ್ಕನ್ನು ಪಡೆಯುವಲ್ಲಿ ಪದವಿಧಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಳ್ಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸುಭದ್ರ ಪಡೆಸಬೇಕು ಎನ್ನುವ ಉದ್ದೇಶದಿಂದ ಚುನಾವಣಾ ಅಯೋಗವು ಮತದಾರರಲ್ಲಿ ಜಾಗೃತಿಯನ್ನು ಮೂಡಿಸಲು ಸ್ವೀಪ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಪಟ್ಟಣ ಪ್ರದೇಶದಲ್ಲಿ ಪುರಸಭೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಗ್ರಾಮಪಂಚಾಯಿತಿಗಳ ಮೂಲಕ ಜಾಗೃತಿ ಮೂಡಿಸುವ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ
ಈಶಾನ್ಯ ಪದವೀಧರ ಮತ ಕ್ಷೇತ್ರದ ಪದವೀಧರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ನೋಂದಯಿಸಿಕೊಳ್ಳುವAತೆ ಜಾಗೃತಿ ಮೂಡಿಸಲು ಅ.೨೬, ಅ.೩೦ ರಂದು ಮತದಾರರ ವಿಶೇಷ ನೋಂದಣಿ ಅಭಿಯಾವನ್ನು ಹಮ್ಮಿಕೊಳ್ಳಲಾಗಿದೆ ಅದ್ದರಿಂದ ಮತದಾರರು ನಮೂನೆ ೧೮ರಲ್ಲಿ ದಾಖಲೆಗಳೊಂದಿಗೆ ಅರ್ಜಿಯನ್ನು ನ.೬, ರೊಳಗಾಗಿ ಸಲ್ಲಿಸಬೇಕು ಕರಡು ಮತದಾರರ ಪಟ್ಟಿ ಪ್ರಕಟಣೆ ನ.೨೩,ಹಕ್ಕು ಮತ್ತು ಆಕ್ಷೇಪಣೆಗಾಗಿ ನಿಗದಿಪಡಿಸಿದ ಅವಧಿ ನ.೨೩ ರಿಂದ ಡಿ.೯ ರವರೆಗೆ, ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕ ಡಿ.೩೦ ಆಗಿರುತ್ತದೆ ಎಂದು ತಿಳಿಸಿದರು.
ವಿಶೇಷ ನೋಂದಣಿ ಅಭಿಯಾನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ