ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರ
ಬಳ್ಳಾರಿ:ಪ್ರಜಾಪ್ರತಿನಿಧಿ ಸಭೆಯನ್ನು ಶಾಸನಬದ್ಧ ಸಂಸ್ಥೆಯನ್ನಾಗಿ ಮಾಡುವ ಮೂಲಕ ಆಡಳಿತ ವಿಕೇಂದ್ರೀಕರಣ ಗೊಳಿಸಿದವರು ನಾಲ್ವರು ಕೃಷ್ಣರಾಜ ಒಡೆಯರ್ ಎಂದು ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಹೇಳಿದರು.
ತಾಲ್ಲೂಕಿನ ಸಂಜೀವರಾಯನಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಾಮಾಜಿಕ ಕೊಡುಗೆಗಳ ಕುರಿತು ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರುಸ,ರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಲು 1918ರಲ್ಲಿ ಸರ್ ಲೆಸ್ಲಿ ಮಿಲ್ಲರ್ ಅವರ ನೇತೃತ್ವದಲ್ಲಿ ಆಯೋಗ ರಚನೆ ಮಾಡಿ 1921ರಲ್ಲಿ ಬ್ರಾಹ್ಮಣರು ಮತ್ತು ಆಂಗ್ಲೋ ಇಂಡಿಯನ್ನರನ್ನು ಹೊರತು ಪಡಿಸಿ ಶೇಕಡ 75ರಷ್ಟು ಉದ್ಯೋಗ ಹಿಂದುಳಿದ ವರ್ಗಗಳಿಗೆ ನೀಡಿ ಮೀಸಲಾತಿ ಜನಕ ಎಂದು ಕರೆಸಿಕೊಂಡವರು ನಾಲ್ವಡಿ ಕೃಷ್ಣರಾಜ ಒಡೆಯರ್. ಅವರ ದೂರದೃಷ್ಟಿಯಿಂದ ಮೈಸೂರು ಸಂಸ್ಥಾನ ಮಾದರಿ ಸಂಸ್ಥಾನವಾಗಿ ರೂಪುಗೊಂಡು ಶಿಕ್ಷಣದಲ್ಲಿ ಪ್ರಗತಿ ಸಾಧಿಸಲು ಮೈಸೂರು ವಿಶ್ವವಿದ್ಯಾಲಯ,ಕನ್ನಡ ಸಾಹಿತ್ಯ ಪರಿಷತ್, ವಾಣಿ ವಿಲಾಸ ಸಾಗರ ಹಾಗೂ ಕನ್ನಂಬಾಡಿ ಅಣೆಕಟ್ಟು ನಿರ್ಮಾಣಗೊಂಡವು.
ಆದ್ದರಿಂದ ಅವರ ಸಾಮಾಜಿಕ ಕೊಡುಗೆಗಳನ್ನು ವಿದ್ಯಾರ್ಥಿಗಳು ಸದಾ ನೆನೆಯಬೇಕು ಮತ್ತು ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಸಮ್ಮ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಿಂಚೇರಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಗುರುಗಳಾದ ನಂದಕಿಶೋರ್, ಶಿಕ್ಷಕರಾದ ಗುರುಪ್ರಸಾದ್ ಹಾಗೂ ವಿದ್ಯಾರ್ಥಿ ಪ್ರತಿನಿಧಿ ಮಹೇಶ್,ಮನು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ