ನಮ್ಮ ಪ್ರಜಾ ಸಾಕ್ಷಿ ವರದಿಗೆ ಸ್ಪಂದಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ್

ಕೊಟ್ಟೂರು: ವೈದ್ಯರ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು ನೇಮಕದ ಪ್ರಕ್ರಿಯೆ ಮುಗಿದ ಕೂಡಲೇ ನಮ್ಮ ಕ್ಲಿನಿಕ್ ಗೆ ನೇಮಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ್ ತಿಳಿಸಿದರು.

ಪಟ್ಟಣದ ನಮ್ಮ ಕ್ಲಿನಿಕ್ ಗೆ ಗುರುವಾರ ಭೇಟಿ ನೀಡಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿ ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಆರೋಗ್ಯಾಧಿಕಾರಿಗಳು ತಾತ್ಕಾಲಿಕವಾಗಿ ವೈದ್ಯರನ್ನು ನೇಮಿಸಲಾಗಿದ್ದು ಔಷಧಿಗಳ ದಾಸ್ತಾನು ಸಹ ಮಾಡಲಾಗಿದೆ ಎಂದರು.

ಪಟ್ಟಣದ ಹೊರವಲಯದಲ್ಲಿ ಉತ್ತಮ ಪರಿಸರದಲ್ಲಿರುವ ನಮ್ಮ ಕ್ಲಿನಿಕ್ ಸ್ಥಳ ಆಯ್ಕೆ ಸೂಕ್ತವಾಗಿದ್ದು ಸಾರ್ವಜನಿಕರ ಗಮನ ಸೆಳೆಯಲು ವ್ಯಾಪಕ ಪ್ರಚಾರ ಹಾಗೂ ನಿರಂತರವಾಗಿ ವೈದ್ಯಕೀಯ ಮೇಳ ಆಯೋಜಿಸುವಂತೆ ತಾಲ್ಲೂಕು ವೈದ್ಯಾಧಿಕಾರಿಗೆ ಸೂಚಿಸಿದರು.

ತಾಲ್ಲೂಕಿನಾದ್ಯಂತ ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಬಗ್ಗೆ ಗಮನ ಸೆಳೆದಾಗ ಕೂಡಲೇ ತಾಲ್ಲೂಕಿನಾದ್ಯಂತ ನಕಲಿ ವೈದ್ಯರ ಮೇಲೆ ದಾಳಿ ಮಾಡಿ ಕ್ರಮ ಕೈಗೊಳ್ಳುತ್ತೆವೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಗೆ ಮೇಲ್ದರ್ಜೇಗೇರಿಸಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಹಾಗೂ ತಜ್ಙ ವೈದ್ಯರನ್ನು ನೇಮಕ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಪ್ರದೀಪ್ ಹಾಗೂ ವೈದ್ಯರು ಹಾಗೂ ಸಿಬ್ಬಂದಿ ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ