ರಾಜ್ಯ ಮಟ್ಟದ ಕರುನಾಡ ಸೇವಾರತ್ನ ಪ್ರಶಸ್ತಿಗೆ ಭಾಜನರಾದ ರಮೇಶ.ಕೆ

ಮಸ್ಕಿ : ದಿವ್ಯ ಜ್ಞಾನಿ ಸಹದೇವಪ್ಪ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಧಾರವಾಡ ಹಾಗೂ ವೀರ ಸಿಂಧೂರ ಲಕ್ಷ್ಮಣ ಫೌಂಡೇಶನ್ ಹಾವೇರಿ ಸಂಯುಕ್ತಾಶ್ರಯದಲ್ಲಿ ಧಾರವಾಡದ ರಂಗಾಯಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕರುನಾಡ ಸೇವಾ ರತ್ನ ಪ್ರಶಸ್ತಿ 2022-23ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ರಮೇಶ ಕೆ.(ಸಹಾಯಕ ಅಭಿವೃದ್ಧಿ ಅಧಿಕಾರಿಗಳು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ರಾಯಚೂರು) ಇವರಿಗೆ ರಾಜ್ಯ ಮಟ್ಟದ ಕರುನಾಡ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 ದಿವ್ಯ ಜ್ಞಾನಿ ಸಹದೇವಪ್ಪ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಧಾರವಾಡ ಹಾಗೂ ವೀರ ಸಿಂಧೂರ ಲಕ್ಷ್ಮಣ ಫೌಂಡೇಶನ್ ಹಾವೇರಿ ಸಂಯುಕ್ತಾಶ್ರಯದಲ್ಲಿ ಧಾರವಾಡದ ರಂಗಾಯಣದಲ್ಲಿ ಇದೇ ಭಾನುವಾರ ನಡೆದ ರಾಜ್ಯ ಮಟ್ಟದ ಕರುನಾಡ ಸೇವಾರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಿಂಧನೂರಿನ ಕೆ.ಹೊಸಹಳ್ಳಿ ಗ್ರಾಮದ ಶ್ರೀ ರಮೇಶ ಕೆ.(ಸಹಾಯಕ ಅಭಿವೃದ್ಧಿ ಅಧಿಕಾರಿಗಳು ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ರಾಯಚೂರು) ಇವರ ಸಾಹಿತ್ಯ-ರಂಗಕಲೆ ಸಾಮಾಜಿಕ ಕಳಕಳಿಯನ್ನು ಗುರುತಿಸಿ ರಾಜ್ಯ ಮಟ್ಟದ ಕರುನಾಡ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಪ್ರಶಸ್ತಿಗೆ ಭಾಜೀನರಾದ ರಮೇಶ ಕೆ.ಅವರಿಗೆ ಹಾಗೂ ಪ್ರಶಸ್ತಿ ನೀಡಿ ಗೌರವಿಸಿದ ದಿವ್ಯ ಜ್ಞಾನಿ ಸಹದೇವಪ್ಪ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಧಾರವಾಡ ಹಾಗೂ ವೀರ ಸಿಂಧೂರ ಲಕ್ಷ್ಮಣ ಫೌಂಡೇಶನ್ ಹಾವೇರಿ ಇವರಿಗೆ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಹಳೆಯ ವಿದ್ಯಾರ್ಥಿಗಳು ಸಂಘದ ವತಿಯಿಂದ ಹಾಗೂ ಗ್ರಾಮಸ್ಥರಿಂದ ಗೌರವ ಪೂರ್ವಕ ಅಭಿನಂದನೆಗಳನ್ನು ಕೋರಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ