ರಸ್ತೆ ವಿಭಜಕ & ಚರಂಡಿ ಕಾಮಗಾರಿ ಕಳಪೆ : ಕ್ರಮಕ್ಕೆ ಒತ್ತಾಯಿಸಿ ವಿವಿಧ ಸಂಘಟನೆಗಳು ಶಾಸಕರಲ್ಲಿ ಮನವಿ

ಮಸ್ಕಿ : ಪಟ್ಟಣದಲ್ಲಿ ನಡೆಯುತ್ತಿರುವ ಚರಂಡಿ ಹಾಗೂ ವಿಭಜಕ ಕಾಮಗಾರಿ ಅವೈಜ್ಞಾನಿಕವಾಗಿದ್ದು ಕೂಡಲೇ ಕೆಲಸ ನಿಲ್ಲಿಸಿ ಬಿಲ್ ಪಾವತಿಯನ್ನು ತಡೆಯಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಸ್ಕಿ ಶಾಸಕರಾದ ಆರ್ ಬಸನಗೌಡ ತುರುವಿಹಾಳ ಅವರಿಗೆ ಮನವಿ ಸಲ್ಲಿಸಲಾಯಿತು.

ಕಳೆದ ಕೆಲ ದಿನಗಳಿಂದ ಮಸ್ಕಿ ಪಟ್ಟಣದಲ್ಲಿ ಆರಂಭವಾಗಿರುವ ರಸ್ತೆ ವಿಭಜಕ ಮತ್ತು ಚರಂಡಿ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದೆ. ಅಂದಾಜು ಪಟ್ಟಿಯಲ್ಲಿರುವಂತೆ 10 ಕೋಟಿ ರೂ ಕಾಮಾಗಾರಿಯನ್ನು ಮಾಡದೆ ಬೇಕಾಬಿಟ್ಟಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಂಘಟನೆ ಮುಖಂಡರು ಆರೋಪಿಸಿದರು.

ಕಡಿಮೆ ಗುಣಮಟ್ಟದ ಸಿಮೆಂಟ್, ಕಡಿಮೆ ಸಾಮರ್ಥ್ಯದ ಕಬ್ಬಿಣಗಳನ್ನು ಬಳಸಿ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಲಾಗಿದ್ದು ಇದುವರೆಗೂ ಸ್ಪಂದಿಸಿಲ್ಲ.

ಕೂಡಲೇ ಈ ಬಗ್ಗೆ ಶಾಸಕರು ಗಮನಹರಿಸಿ ಕಾಮಗಾರಿಯ ಗುಣಮಟ್ಟದಿಂದ ನಿರ್ವಹಿಸಲು ಗುತ್ತಿಗೆದಾರರಿಗೆ ಸೂಚಿಸಬೇಕು ತಪ್ಪಿಸ್ತ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಅಧ್ಯಕ್ಷರುಗಳಾದ ಅಶೋಕ ಮುರಾರಿ, ಆರ್.ಕೆ.ನಾಯಕ, ಕಿರಣ ವಿ ಮುರಾರಿ,ದುರುಗರಾಜ ವಟಗಲ್, ಸಿದ್ದು ಮುರಾರಿ, ವಿಜಯಕುಮಾರ್ ಬಡಿಗೇರ್, ಬಸವರಾಜ ಡಿ ಉದ್ಬಾಳ, ಮಲ್ಲಿಕ್ ಕೊಠಾರಿ ಸೇರಿದಂತೆ ಇನ್ನಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*