ಅಭ್ಯರ್ಥಿಗಳ ಸ್ಥಳ ನಿಯುಕ್ತಿ ಪ್ರಕ್ರಿಯೆ ನಡೆಸಿ ಆದೇಶ ಪತ್ರ ನೀಡುವಂತೆ : ಮನವಿ
ಮಸ್ಕಿ : ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 2022 ರ ಅಂತಿಮ ಪಟ್ಟಿಯಲ್ಲಿ ಇರುವ ಅಭ್ಯರ್ಥಿಗಳಿಗೆ ಸ್ಥಳ ನಿಯುಕ್ತಿ ಪ್ರಕ್ರಿಯೆ ನಡೆಸಿ ಆದೇಶ ಪತ್ರ ನೀಡುವಂತೆ ಮಾಜಿ ಸಚಿವ ಬಯ್ಯಾಪುರ ಹಾಗೂ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ರವರಿಗೆ ಮನವಿಯನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿ ರವಿ ಚುಕ್ಕನಹಟ್ಟಿ ರವರು ಕಲ್ಯಾಣ ಕರ್ನಾಟಕ ಭಾಗದ GPSTR 2022 ರ ಅಂತಿಮ ಪಟ್ಟಿಯಲ್ಲಿ ಇರುವ ರಾಯಚೂರು ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಹಲವಾರು ವರ್ಷಗಳಿಂದ ಶಿಕ್ಷಕರ ಕೊರತೆ ತೀವ್ರವಾಗಿದ್ದು ಹಲವು ಶಾಲೆಗಳಲ್ಲಿ ಶೂನ್ಯ ಶಿಕ್ಷಕರ ಸಂಖ್ಯೆ ಇರುವುದು ಮತ್ತು ಇತ್ತೀಚೆಗೆ ನಡೆದ ಇಲಾಖಾ ವರ್ಗಾವಣೆ ಪ್ರಕ್ರಿಯೆಯಿಂದ ಈ ಸಮಸ್ಯೆ ತೀವ್ರವಾಗಿರುತ್ತದೆ. ನಮ್ಮ ಜಿಲ್ಲೆಯಲ್ಲಿ ಸುಮಾರು 5000 ಶಿಕ್ಷಕರ ಹುದ್ದೆಗಳು ಖಾಲಿ ಇರುತ್ತದೆ ಹಾಗೂ ಈ ಕಾರಣಕ್ಕಾಗಿ ನಮ್ಮ ಭಾಗ ಶೈಕ್ಷಣಿಕವಾಗಿ ಹಿಂದೆ ಉಳಿದಿರುವ ವಾಸ್ತವತೆ ತಮ್ಮ ಗಮನಕ್ಕೆ ಇರುತ್ತದೆ ಎಂದರು.
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯಿಂದ ನಮ್ಮ ಭಾಗದ ಜಿಲ್ಲೆಗಳನ್ನು ಬಿಟ್ಟು ಇತರ ಜಿಲ್ಲೆಗಳಲ್ಲಿ (NHK) ಕೌನ್ಸಲಿಂಗ್ ಪ್ರಕ್ರಿಯೆ ನಡೆಯುತ್ತಿರುವಂತೆ ನಮ್ಮ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿಯೂ ಸ್ಥಳನಿಯುಕ್ತಿ ಪ್ರಕ್ರಿಯೆ ನಡೆಯಬೇಕಾಗಿತ್ತು. ಆದರೆ ನಮ್ಮ ಭಾಗದ ಕೆಲವು ಜಿಲ್ಲೆಗಳಿಗೆ ಸಂಬಂಧಿಸಿದಂತೆ KAT ಯಲ್ಲಿ ಪ್ರಕರಣಗಳು ಬಾಕಿ ಇರುವುದರಿಂದ ಸದರಿ ಪ್ರಕ್ರಿಯೆಯನ್ನು ಇಡೀ ಕಲ್ಯಾಣ ಕರ್ನಾಟಕ ಭಾಗಕ್ಕೆ ತಡೆಹಿಡಿಯಲಾಗಿರುತ್ತದೆ. ಈ ಸಂಬಂಧ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಹರಿಕಾರರಾದ ತಾವು ನಮ್ಮ ಅಭ್ಯರ್ಥಿಗಳ ಪರವಾಗಿ ವಿಶೇಷ ಕಾಳಜಿವಹಿಸಿ ನಮ್ಮ ಭಾಗದ ಶಿಕ್ಷಕರ ತೀವ್ರ ಕೊರತೆ ಸಮಸ್ಯೆಗಳನ್ನು ನ್ಯಾಯಾಲಯದ ಗಮನಕ್ಕೆ ತೆಗೆದುಕೊಂಡು ಬಂದು ಸದರಿ ಪ್ರಕರಣಗಳನ್ನು ಶೀಘ್ರ ಇತ್ಯರ್ಥ ಪಡಿಸುವಲ್ಲಿ ಹಾಗೂ ನಮ್ಮ ಭಾಗದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಸ್ಥಳ ನಿಯುಕ್ತಿ ಪ್ರಕ್ರಿಯೆ ಆದಷ್ಟು ಬೇಗನೆ ನಡೆಯುವಂತೆ ಮಾಡಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ಸಿಗುವಂತೆ ಮಾಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮೌನೇಶ್ ಹೊಸಮನಿ,ದೊಡ್ಡಪ್ಪ ಗಬ್ಬೂರು,ರವಿ,ನಿಂಗಮ್ಮ, ರೇಣುಕಾ, ಸಹನಾ,ಶೋಭಾ,ಚೆನ್ನಬಸವ,ಬಸವರಾಜ್,ಮಲ್ಲಿಕಾರ್ಜುನ್ ಹಾಗೂ ಇತರರು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ