ಅದ್ದೂರಿಯಾಗಿ ಜರುಗಿದ ಭ್ರಮರಾಂಬದೇವಿ ಜಂಬೂ ಸವಾರಿ


ಮಸ್ಕಿ: ನವರಾತ್ರಿ ಉತ್ಸವ ನಿಮಿತ್ತ ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ನಡೆದ ದೇವಿ ಪುರಾಣ ಮುಕ್ತಾಯ ಹಾಗೂ ಜಂಬೂ ಸವಾರಿ ಶನಿವಾರ ಪಟ್ಟಣದಲ್ಲಿ ಅದ್ಧೂರಿಯಾಗಿ ನಡೆಯಿತು.

ಅಶೋಕ ವೃತ್ತದಲ್ಲಿ ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ ಅಂಬಾರಿಗೆ ಪುಷ್ಪಾರ್ಪಣೆ ಮಾಡಿ ಚಾಲನೆ ನೀಡಿದರು. ವೇದಿಕೆಯ ಮೇಲೆ ಶಾಸಕ ಆರ್.ಬಸವನಗೌಡ ತುರುವಿಹಾಳ,ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ,

ಮಹಾದೇವಪ್ಪ ಗೌಡ ಪೊಲೀಸ್ ಪಾಟೀಲ,ತಹಶೀಲ್ದಾರ್‌ ಸುಧಾ ಅರಮನೆ,ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಸರ್ಕಲ್ ಪೋಲಿಸ್ ಇನ್‌ಸ್ಪೆಕ್ಟರ್ ಬಾಲಚಂದ್ರ ಡಿ.ಲಕ್ಕಂ,

ಪಿ.ಎಸ್.ಐ.ತಾರಾ ಬಾಯಿ, ಮಲ್ಲಯ್ಯ ಮುರಾರಿ,ಪ್ರಧಾನ ಅರ್ಚಕ ರಾದ ಸಿದ್ದಯ್ಯ ಹಿರೇಮಠ ಸೇರಿದಂತೆ ಅನೇಕ ಮುಖಂಡರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.

ಗಂಗಾಸ್ಥಳದಿಂದ ಸಾವಿರಕ್ಕೂ ಹೆಚ್ಚು ಮಹಿಳೆಯರು ಪೂರ್ಣಕುಂಭ, ಹಾಗೂ ಕಳಸಹೊತ್ತು ಮೆರವಣಿಗೆಯಲ್ಲಿ ಸಾಗಿದರು.

ಅಶೋಕ ವೃತ್ತದಿಂದ ಆರಂಭವಾದ ಜಂಬೂ ಸವಾರಿ ಹಾಗೂ ಪಲ್ಲಕ್ಕಿ ಮೆರವಣಿಗೆ ಅಗಸಿ, ಮುಖ್ಯ ಬಜಾರ, ದೈವದಕಟ್ಟೆ, ತೇರು ಬೀದಿ, ಕನಕವೃತ್ತದ ಮೂಲಕ ಸಾಗಿ ಭ್ರಮರಾಂಬಾ ದೇವಸ್ಥಾನಕ್ಕೆ ಆಗಮಿಸಿತ್ತು.

ಸಂಡೂರಿನ ಚಂದ್ರಶೇಖರಯ್ಯ ಸ್ವಾಮಿಗಳ ವೀರಗಾಸೆ ನೃತ್ಯ, ಡೊಳ್ಳು ಕುಣಿತ,ನಂದಿ ಕೊಲು,ಹಲಗೆ,ಸರಿದಂತೆ ವಿವಿಧ ವಾದ್ಯಗಳು ಪಾಲ್ಗೊಂಡಿದ್ದವು.

ಜಂಬೂ ಸವಾರಿಯ ವೇಳೆ ಪೂರ್ಣ ಪ್ರಮಾಣದ ಕುಂಭ ಮೇಳದಲ್ಲಿ ಭಾಗಿಯಾಗಿದ್ದ 751 ಕ್ಕೂ ಹೆಚ್ಚು ಮಹಿಳೆಯರಿಗೆ ಸಜ್ಜನ್ ಕುಟುಂಬದ ರೇಷ್ಮಾ ನಾಗರಾಜ್ ಸಜ್ಜನ್ ಕುಟುಂಬದ ವತಿಯಿಂದ ಮುತ್ತೈದೆಯ ಹುಡಿ ಸಾಮಾನನ್ನು ಗಚ್ಚಿನ ಮಠದ ಶ್ರೀ ಶ್ರೀ ಶ್ರೀ ವರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ರವರ ಸಮ್ಮುಖದಲ್ಲಿ ಆಶೀರ್ವದಿಸಿ ಶುಭ ಹಾರೈಸಿ ವಿತರಿಸಲಾಯಿತು. ಅಭಿಷೇಕ : ಭ್ರಮರಾಂಬ ದೇವಿಗೆ ಗಂಗಾಸ್ಥಳದಿಂದ ನೂರಾರು ಮಹಿಳೆಯರು ಹೊತ್ತು ತಂದ ಜಲದಿಂದ ಅಭಿಷೇಕ ಮಾಡಲಾಯಿತು.

ದೇವಿಗೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ನಂತರ ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು.

ಈ ಉತ್ಸವದಲ್ಲಿ ದೇವಿ ಕಮಿಟಿಯ ಸದಸ್ಯರು, ಪೊಲೀಸ್ ಇಲಾಖೆ ಸಿಬ್ಬಂದಿ,ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಭಾಗಿಯಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ