ತಾಲೂಕು ಮಟ್ಟದ "ನನ್ನ ಮಣ್ಣು, ನನ್ನ ದೇಶ ಅಭಿಯಾನಕ್ಕೆ ಚಾಲನೆ"
ಕಾನ ಹೊಸಹಳ್ಳಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸಹಯೋಗದೊಂದಿಗೆ ಬುಧವಾರ ಆಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ನನ್ನ ಮಣ್ಣು, ನನ್ನ ದೇಶ ಅಭಿಯಾನದಡಿ ಮಣ್ಣು ಸಂಗ್ರಹಣೆ ಕಾರ್ಯಕ್ರಮ ನಡೆಯಿತು. ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಆಧಿಕಾರಿ ವೈ ರವಿಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ಆಮೃತ ಮಹೋತ್ಸವ ಹಿನ್ನಲೆಯಲ್ಲಿ ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ವೀರ ಪುರುಷ ಹಾಗೂ ಮಹಿಳೆಯರನ್ನು ಗೌರವಿಸುವ ಉದ್ದೇಶದಿಂದ ಪ್ರಧಾನಿಯವರ ಆಶಯದಂತೆ ‘ನನ್ನ ಮಣ್ಣು ನನ್ನ ದೇಶ’ ಅಭಿಯಾನ ನಡೆಯುತ್ತಿದೆ. ಇದಕ್ಕೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಿಂದ ಮಣ್ಣು ಸಂಗ್ರಹಿಸಿ ನೆಹರೂ ಯುವ ಕೇಂದ್ರದ ಮೂಲಕ ಕೇಂದ್ರಕ್ಕೆ ಕಳಿಸಿಕೊಡಲಾಗುತ್ತದೆ ಎಂದರು. ಈ ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿ ಮಂಜುನಾಥ, ಗ್ರಾ.ಪಂ ಅಧ್ಯಕ್ಷೆ ಉಮಾದೇವಿ ಆಂಜಿನಪ್ಪ, ಉಪಾಧ್ಯಕ್ಷೆ ಚೌಡಮ್ಮ ಕರಿಬಸಪ್ಪ, ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ನೆರೇಗಾ ಕೂಲಿ ಕಾರ್ಮಿಕರು, ಸಿಬ್ಬಂದಿಗಳು, ಸಾರ್ವಜನಿಕರು ಇದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ