ರಾಜ್ಯಾದ್ಯಂತ ನವೆಂಬರ್ 23 ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಮಸ್ಕಿ : ರಾಜ್ಯದ ಸರಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕಳೆದೆರಡು ದಶಕಗಳಿಂದ ಕಡಿಮೆ ವೇತನಕ್ಕೆ ಅಭದ್ರತೆಯಲ್ಲಿ ಬದುಕುತ್ತಿರುವ ಸುಮಾರು ಹನ್ನೊಂದು ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರ ಬಹುದಿನದ ಬೇಡಿಕೆಯಾದ ಸೇವಾ ವಿಲೀನಾತಿ ಅಥವಾ ಸೇವಾ ಖಾಯಮಾತಿಗಾಗಿ ಕರ್ನಾಟಕ ರಾಜ್ಯ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಹನುಮಂತಗೌಡ ಆರ್ ಕಲ್ಮನಿಯವರ ಆದೇಶದ ಮೇರೆಗೆ ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ ಹೊಸಪೇಟೆಯವರ ಸೂಚನೆಯ ಮೇರೆಗೆ,

ಇದೇ ತಿಂಗಳ 23 ನೇ ತಾರೀಕಿನಿಂದ ರಾಜ್ಯಾಧ್ಯಂತ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ತರಗತಿಗಳನ್ನು ಬಹಿಷ್ಕರಿಸಿ, ಆಯಾ ಜಿಲ್ಲಾ ಕೇಂದ್ರ ಹಾಗೂ ಜಂಟಿನಿರ್ದೇಶಕರ ಕಾರ್ಯಾಲಯದ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮಾಡಲು ನಿರ್ಧರಿಸಲಾಗಿದೆ.

ಮುಂದುವರೆದು ಬೆಳಗಾವಿಯ ಸುವರ್ಣ‌ಸೌಧದಲ್ಲಿ ಡಿಸೆಂಬರ್ ಮಾಹೆಯ ಮೊದಲ ವಾರದಲ್ಲಿ ಆರಂಭವಾಗುವ ಚಳಿಗಾಲದ ಅಧಿವೇಶನ ನಡೆದಾಗ,ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರು ಸುವರ್ಣ ಸೌಧದ ಮುಂದೆ ಉಗ್ರ ಹೋರಾಟ ಮಾಡಲು ನಿರ್ಧರಿಸಲಾಗಿದೆ.ಅದಕ್ಕೆ ಮಸ್ಕಿ ತಾಲೂಕಿನ ಅತಿಥಿ ಉಪನ್ಯಾಸಕರೆಲ್ಲರೂ ಬೆಂಬಲಿಸಿ ತರಗತಿಗಳನ್ನು ಬಹಿಷ್ಕರಿಸಿ ರಾಯಚೂರಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಮುಂದೆ ನಡೆಯುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಮಸ್ಕಿ ತಾಲೂಕಾ ಘಟಕದ ತಾಲೂಕಾ ಅಧ್ಯಕ್ಷ ಸುರೇಶ ಬಳಗಾನೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ