ಜನರ ಮೂಲಭೂತ ಸೌಕರ್ಯಗಳಿಗೆ ತೊಂದರೆಯಾದರೆ ಸಹಿಸೆನು : ಶಾಸಕ ಕೆ ನೇಮಿರಾಜನಾಯ್ಕ
ಕೊಟ್ಟೂರು: ಇಡೀ ಕ್ಷೇತ್ರದಲ್ಲಿ ಜನರ ಮೂಲಭೂತ ಸೌಕರ್ಯಗಳಿಗೆ ಯಾವುದೇ ಧಕ್ಕೆ ಬಾರದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಶಾಸಕ ನೇಮಿರಾಜನಾಯ್ಕ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಡೀ ಕ್ಷೇತ್ರಗಳಲ್ಲಿ ವಿದ್ಯುತ್ ಒದಗಿಸುವಲ್ಲಿ ಯಾವುದೇ ವ್ಯತ್ಯಯ ಉಂಟಾದರೆ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಎಂದರು. ಮಂಗಳವಾರ ಪಟ್ಟಣದ ತಾಲೂಕು ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು, ಕೊಟ್ಟೂರು ತಾಲ್ಲೂಕಿನ ೧೪ ಗ್ರಾಮ ಪಂಚಾಯಿತಿಗಳಲ್ಲಿ ಜನರ ಸಮಸ್ಯೆಗಳಿಗೆ ಪೂರಕವಾಗಿ ಅಧಿಕಾರಿಗಳು ಸ್ಪಂದಿಸಬೇಕು ಎಂದರು. ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಪಿಡಿಓಗಳಿಂದ ಮುಂದಿನ ಮಾರ್ಚ್ ಏಪ್ರಿಲ್ ವರೆಗೆ ನೀರಿನ ಬರವಿದ್ದು, ಇರುವ ಅನುದಾನವನ್ನು ಸಮರ್ಪಕವಾಗಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಬಳಸಬೇಕು ಎಂದರು. ಸರ್ಕಾರದಿಂದ ನಯಾಪೈಸೆಯ ಅನುದಾನವು ಸಿಗದ ಪರಿಸ್ಥಿತಿಯಿದೆ. ಆದ್ದರಿಂದ ಇರುವ ಅನುದಾನದಲ್ಲೇ ಸರಿಯಾಗಿ ಬಳಸಬೇಕು ಎಂದರು. ಕೊಟ್ಟೂರು ಪಟ್ಟಣದಲ್ಲಿ ಸುಮಾರು ೩೨೦೦೦ ಜನಸಂಖ್ಯೆಯ ಮಾಹಿತಿ ಪಡೆದು ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದ್ದು, ಇದನ್ನು ಸರಿಪಡಿಸಬೇಕೆಂದು ಮುಖ್ಯಾಧಿಕಾರಿಗಳಿಗೆ ತಿಳಿಸಿದರು.
ಶುದ್ಧ ಕುಡಿಯುವ ನೀರಿನ ಘಟಕಗಳ ಮಾಹಿತಿ ಪಡೆದು ಅವುಗಳೇನಾದರೂ ದುರಸ್ತಿಯಿದ್ದರೆ ಕೂಡಲೇ ಅವುಗಳನ್ನು ಸರಿಪಡಿಸಲು ಸೂಚಿಸಿದರು. ಶೇ. ೫೦ ರಷ್ಟು ಕುಡಿಯುವ ನೀರಿನ ಸಮಸ್ಯೆಯಿದೆ ಅದನ್ನು ಸರಿಪಡಿಸಲಾಗುವುದು ಎಂದರು. ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಕುಡಿಯುವ ನೀರಿನ ಸಮಸ್ಯೆಗಳನ್ನು ಶೀಘ್ರದಲ್ಲಿಯೇ ಬಗೆಹರಿಸಲಾಗುವುದು. ಕೊಟ್ಟೂರು ಪಟ್ಟಣದ ಸಾರ್ವಜನಿಕರು ತಮ್ಮ ತಮ್ಮ ಸೈಟ್‌ಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಇಲ್ಲವಾದರೆ ಸೈಟ್‌ಗಳ ಮಾಲೀಕರಿಗೆ ದಂಡ ಹಾಕಲಾಗುವುದು ಎಂದರು.
ಪ್ರತೀವಾರವೂ ಸಹ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದರು. ರೈತರನ್ನು ತ್ವರಿತ ಗತಿಯಲ್ಲಿ ನಿರ್ವಹಿಸಬೇಕೆಂದು ಕೃಷಿ ಅಧಿಕಾರಿಗಳಿಗೆ ತಿಳಿಸಿದರು. ಪೋಡಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ತಡವಾಗಬಾರದು ಅಲ್ಲದೇ, ಸರ್ಕಾರದಿಂದ ಪಿಂಚಣಿ ಸೌಲಭ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು ಈ ಬಗ್ಗೆ ಯಾವುದೇ ದೂರು ಬಂದರೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಅಧಿಕಾರಿಗಳಿಗೆ ತಿಳಿಸಿದರು. ಸಣ್ಣ ಮಕ್ಕಳಿಗೆ ನೆಗಡಿ ಇನ್ನಿತರೆ ಸೋಂಕುಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಇವುಗಳನ್ನು ನಿರ್ವಹಿಸುವಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರರಾದ ಅಮರೇಶ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರವಿಕುಮಾರ್, ಕಂದಾಯ ನಿರೀಕ್ಷಕ ಹಾಲಸ್ವಾಮಿ, ಜೆಸ್ಕಾಂ ಶಾಖಾಧಿಕಾರಿ ಚೇತನ್, ತಾಲ್ಲೂಕು ಆರೋಗ್ಯಾಧಿಕಾರಿ ಪ್ರದೀಪ್, ಮುಖ್ಯಾಧಿಕಾರಿ ನಸುರುಲ್ಲಾ, ತಾಲ್ಲೂಕಿನ ಎಲ್ಲಾ ಪಿಡಿಓಗಳು ಹಾಜರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ