"ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಕನಕದಾಸರ ಜಯಂತಿ ಆಚರಣೆ"

ಕೊಟ್ಟೂರು : ತಾಲೂಕಿನ ಪೊಲೀಸ್ ಠಾಣೆಯಲ್ಲಿ  ಗುರುವಾರದಂದು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸುವ ಮೂಲಕ ಕನಕ ಜಯಂತಿಯನ್ನು  ಆಚರಿಸಲಾಯಿತು.

ಕನಕದಾಸರು ನಾಡಿನ ಉದ್ದಗಲಕ್ಕೂ ಕಾಲ್ನಡಿಗೆಯಲ್ಲಿ ಸಂಚರಿಸಿ ಭಕ್ತಿಭಾವ, ವೈರಾಗ್ಯಗಳನ್ನು ಸಾರಿ ಸಮಾಜವನ್ನು ಜಾಗೃತಿಗೊಳಿಸಿದರು. ನವ ಸಮಾಜ ನಿರ್ಮಾಣ ಮಾಡಲು ನಕದಾಸರ ಚಿಂತನೆ, ತತ್ವ ಮತ್ತು ಅವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಿಪಿಐ ವೆಂಕಟಸ್ವಾಮಿ ಮಾತನಾಡಿದರು. 

ಇದೇ ಸಂದರ್ಭದಲ್ಲಿ ಕೊಟ್ಟೂರು ಪೊಲೀಸ್ ಠಾಣೆಯ ಪಿಎಸ್ಐ ಗೀತಾಂಜಲಿ ಸಿಂಧೆ, ನೂರ್ ಮುಹಮ್ಮದ್, ಚಂದ್ರು,  ಏರಿಸ್ವಾಮಿ ,ಪೊಲೀಸ್  ಇಲಾಖೆಯ ಸಿಬ್ಬಂದಿ  ವರ್ಗದವರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಪಡಿತರ ವಿತರಣೆಯಲ್ಲಿ ಸರ್ವರ್ ದೋಷ ಕಾದುಕುಳಿತ ಬಡ ಕುಟುಂಬಗಳು

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*