ಸಿಪಿಐ(ಎಂ.ಎಲ್) ಲಿಬರೇಶನ್ ಪ್ರಥಮ ಜಿಲ್ಲಾ ಸಮ್ಮೇಳನ ‘ಫ್ಯಾಸಿಸ್ಟ್ ಶಕ್ತಿಗಳನ್ನು ಮಣಿಸಲು ಒಂದಾಗಿ’

ಮಸ್ಕಿ : ಫ್ಯಾಸಿಸ್ಟ್ ಶಕ್ತಿಯಾದ ಬಿಜೆಪಿ ಕೋಮುವಾದವನ್ನು ಮುನ್ನೆಲೆಗೆ ತಂದು ಸಮಾಜದಲ್ಲಿ ಒಡಕು ಮೂಡಿಸುತ್ತಿದ್ದು, ಇದನ್ನು ಜನತೆ ಅರ್ಥೈಸಿಕೊಂಡು ಮುಂಬರುವ ಸಾರ್ವಜನಿಕ ಚುನಾವಣೆಯಲ್ಲಿ ಸಂವಿಧಾನ ವಿರೋಧಿ ಹಾಗೂ ಜನವಿರೋಧಿಯಾದ ಬಿಜೆಪಿಯನ್ನು ಮಣಿಸಲು ಒಗ್ಗಟ್ಟಾಗಬೇಕು ಎಂದು ಸಿಪಿಐ(ಎಂ.ಎಲ್) ಲಿಬರೇಶನ್ ರಾಜ್ಯ ಸಮಿತಿ ಕಾರ್ಯದರ್ಶಿ ಕ್ಲಿಫ್ಟನ್ ಡಿ ರೊಜೊರಿಯೋ ಹೇಳಿದರು. 

ಪಟ್ಟಣದ ಸರ್ಕಿಟ್ ಹೌಸ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪ್ರಥಮ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೈನಂದಿನ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು, ಜನರು ಜೀವನ ನಿರ್ವಹಣೆಗೆ ಪರಿತಪಿಸುತ್ತಿದ್ದಾರೆ. ಕಾರ್ಮಿಕರ ಕಾನೂನುಗಳಿಗೆ ತಿದ್ದುಪಡಿ ತಂದು ದುಡಿಯುವ ಅವಧಿಯನ್ನು ಹೆಚ್ಚುವರಿಗೊಳಿಸಲಾಗಿದ್ದು, ಕಡಿಮೆ ವೇತನಕ್ಕೆ ದುಡಿಸಿಕೊಳ್ಳಲಾಗುತ್ತಿದೆ. ರೈತರಿಗೆ ನೀಡುತ್ತಿದ್ದ ಸಬ್ಸಿಡಿ ಕಡಿತ ಮಾಡಲಾಗಿದೆ. ದಲಿತ, ದಮನಿತರು ಹಾಗೂ ಮಹಿಳೆಯರ ಮೇಲೆ ನಿತ್ಯ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಕಡಿವಾಣ ಇಲ್ಲದಂತಾಗಿದೆ. ಕಾರ್ಪೊರೇಟ್ ಬಂಡವಾಳಿಗರ ೧೪ ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಸಾಲವನ್ನು ಮನ್ನಾ ಮಾಡಿ, ಜನರ ಮೇಲೆ ಇನ್ನಿಲ್ಲದ ತೆರಿಗೆ ಹೊರೆ ಹೇರಿದ್ದು, ಕೇಂದ್ರದ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿ ವಿರೋಧಿ ನಿಲುವುಗಳ ಮೂಲಕ ಭಾರತ ಫೆಡರಲ್ ವ್ಯವಸ್ಥೆಗೆ ಸವಾಲೊಡ್ಡಿದೆ. ನಿತ್ಯ ನಿರಂತರ ಧರ್ಮ, ಜಾತಿ ಹಾಗೂ ಹುಸಿ ರಾಷ್ಟೀಯತೆಯ ಹೆಸರಲ್ಲಿ ಭಾವನಾತ್ಮಕ ವಿಚಾರಗಳನ್ನು ಹರಿಬಿಟ್ಟು ಜನರ ಬದುಕಿನ ಪ್ರಶ್ನೆಗಳನ್ನು ಮರೆಮಾಚಲಾಗಿದೆ. ಹೀಗಾಗಿ ಜನರು ಎಚ್ಚರ ವಹಿಸಿ ಬರುವ ಲೋಕಸಭೆಯಲ್ಲಿ ಫ್ಯಾಸಿಸ್ಟ್ ಶಕ್ತಿಗಳಿಗೆ ಸರಿಯಾದ ಪಾಠ ಕಲಿಸದಿದ್ದರೆ ಇನ್ನಷ್ಟು ಸಂಕಷ್ಟಗಳು ಎದುರಾಗಲಿವೆ ಎಂದು ಕಳವಳ ವ್ಯಕ್ತಪಡಿಸಿದರು. 

ನಂತರ ಸಿಪಿಐ(ಎಂ.ಎಲ್) ಲಿಬರೇಶನ್ ರಾಜ್ಯ ಸಮಿತಿ ಸದಸ್ಯ ಪಿ.ಆರ್ ಎಸ್ ಮಣಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬರಗಾಲ, ಗುಳೆ, ನೀರಿನ ಸಮಸ್ಯೆ, ರೈತರ ಆತ್ಮಹತ್ಯೆಗೆ ಪರಿಹಾರ ಹುಡುಕುವಲ್ಲಿ ಸಂಪೂರ್ಣ ವಿಫಲವಾಗಿವೆ. ಕೇಂದ್ರದ ಬಿಜೆಪಿ ಸರ್ಕಾರ ದೇಶದ ಸಂಪತ್ತನ್ನು ಬಂಡವಾಳಿಗರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಹರಾಜಿಗಿಟ್ಟಿದೆ. ರೈತರು, ಕಾರ್ಮಿಕರು ಹಾಗೂ ದುಡಿಯುವ ಜನರನ್ನು ಸಂವಿಧಾನ ವಿರೋಧಿ ಕಾನೂನುಗಳ ಮೂಲಕ ದಮನಿಸಲು ಹೊರಟಿದೆ ಎಂದು ಹೇಳಿದರು. ಈ ಸಮ್ಮೇಳನದಲ್ಲಿ ೧೬ಜನರ ನೂತನ ಜಿಲ್ಲಾ ಸಮಿತಿಯನ್ನು ರಚಿಸಲಾಯಿತು. ನಾಗರಾಜ ಪೂಜಾರ್ ಅವರನ್ನು ಜಿಲ್ಲಾ ಸಮಿತಿ ಕಾರ್ಯದರ್ಶಿಯನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. 

ಇದೇ ಸಂದರ್ಭದಲ್ಲಿ ಗಂಗಪ್ಪ ತೋರಣದಿನ್ನಿ, ದೇವರಾಜ ಮಡಿವಾಳ,ಚಂದುಸಾಬ ಬೇಳ್ಳಿಗನೂರು, ನರಸಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ