ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳಬೇಡಿ- ಮಂಜುನಾಥ ರೆಡ್ಡಿ
ಮಸ್ಕಿ: ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಮುಂಜಾಗ್ರತೆ ವಹಿಸಬೇಕು, ದುಡಿಯುವ ಮಕ್ಕಳನ್ನು ರಕ್ಷಿಸಿ ಶಿಕ್ಷಣದ ಮುಖ್ಯವಾಹಿನಿಗೆ ಕರೆ ತರಬೇಕು ಹಾಗೂ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಮಂಜುನಾಥ ರೆಡ್ಡಿ ಹೇಳಿದರು.
ಅವರು ಶುಕ್ರವಾರ ಪಟ್ಟಣದಲ್ಲಿ ಜಾಗೃತಿ ಮೂಡಿಸುವದರ ಮುಖಾಂತರ ಪಟ್ಟಣದಲ್ಲಿ ವಿವಿಧ ಹೋಟೆಲ್, ಗ್ಯಾರೇಜ್, ಬೇಕರಿ, ಅಂಗಡಿ, ಬಾರ್&ರೆಸ್ಟೋರೆಂಟ್, ಡಾಬಾ, ಇಟ್ಟಿಗೆ ಭಟ್ಟಿ ಮತ್ತು ಇನ್ನಿತರೆ ವಾಣಿಜ್ಯ ಉದ್ದಿಮೆಗಳಲ್ಲಿ ತಪಾಸಣೆ ಕೈಗೊಂಡಿದ್ದು ಯಾವುದೇ ದುಡಿಯುವ ಮಕ್ಕಳು ಕಂಡು ಬಂದಿರುವುದಿಲ್ಲ. ಯಾವುದೇ ಕಾರಣಕ್ಕೂ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದೆಂದು ತಿಳಿಸಿ, ಸ್ಟಿಕರ್‍ಸ್ ಮತ್ತು ಕರಪತ್ರಗಳನ್ನು ಹಂಚುವುದರ/ಅಂಟಿಸುವುದರ ಮೂಲಕ ಜಾಗೃತಿ ಮೂಡಿಸಲಾಯಿತು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ೨೦೧೬ ರಂತೆ ೧೪ ವರ್ಷದೊಳಗಿನ ಮಕ್ಕಳ ದುಡಿಮೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಹಾಗೂ ೧೫ ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗುತ್ತದೆ ಎಂದರು.
ಒಂದು ವೇಳೆ ದುಡಿಸಿಕೊಂಡಲ್ಲಿ ರೂ. ೫೦,೦೦೦/- ದಂಡ ಹಾಗೂ ೨ ವರ್ಷ ಜೈಲು ಶಿಕ್ಷೆ ಇರುತ್ತದೆ. ವಾಹನಗಳಲ್ಲಿ ಮಕ್ಕಳನ್ನು ಕೃಷಿ ಚಟುವಟಿಕೆಗಳಿಗಾಗಿ ಅಕ್ರಮ ಮತ್ತು ಕಾನೂನು ಬಾಹಿರವಾಗಿ ಸಾಗಾಣಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಜುನಾಥರೆಡ್ಡಿ ಯೋಜನಾ ನಿರ್ದೇಶಕರು ಜಿಲ್ಲಾ ಬಾಲಕಾರ್ಮಿಕ ಯೋಜನೆ ರಾಯಚೂರುರವರ ನೇತೃತ್ವದ ದಾಳಿಯ ತಂಡದಲ್ಲಿ ಶಾಂತಮೂರ್ತಿ ಕಾರ್ಮಿಕ ನಿರೀಕ್ಷಕರು, ಶರಣೇಗೌಡ ಕಂದಾಯ ನಿರೀಕ್ಷಕರು, ರಾಮಚಂದ್ರ ಶಿಕ್ಷಣ ಸಂಯೋಜಕರು, ಗಳಾದ ರಾಮಸ್ವಾಮಿ, ಮಾಳಪ್ಪ, ಹನುಮೇಶ ಮಕ್ಕಳ ರಕ್ಷಣಾ ಘಟಕ, ಮೋಹನ ಮಕ್ಕಳ ಸಹಾಯವಾಣಿ, ವಿರೇಶ ಪೊಲೀಸ್ ಹಾಗೂ ಇಲಾಖೆರವರು ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ