ಮಸ್ಕಿಯ ತಾಲೂಕ ಆಡಳಿತ ಹಾಗೂ ವಿವಿಧ ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಮಸ್ಕಿ: ತಾಲೂಕ ಆಡಳಿತ ಮತ್ತು ಪುರಸಭೆ ವತಿಯಿಂದ ಮಸ್ಕಿ ಸರಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ 68 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಸುಧಾ ಅರಮನೆ ಅವರು ಧ್ವಜಾರೋಹಣ ನೆರವೇರಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಸ್ಕಿ ಶಾಸಕ ಆರ್ ಬಸನಗೌಡ ತುರವಿಹಾಳ ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸಲು ನಾವೆಲ್ಲರೂ ಪಣ ತೊಡಬೇಕಿದೆ

ಇಂದು ಕನ್ನಡ ಭಾಷಾ ಪ್ರಾಂತ್ಯ ಸ್ಥಾಪನೆಗಾಗಿ ಯಾವುದೇ ಹೋರಾಟ ಅನಿವಾರ್ಯವಿಲ್ಲ. ಬದಲಾಗಿ ಕನ್ನಡ ಭಾಷೆಯನ್ನು ಬೆಳೆಸಿ, ಅಭಿವೃದ್ಧಿಪಡಿಸಿ ಮುಂದಿನ ತಲೆಮಾರಿಗೆ ಕೊಂಡೊಯ್ಯುವುದು ಬಹುದೊಡ್ಡ ಸವಾಲಾಗಿದೆ. ಕಂಪ್ಯೂಟರ್‌ ಯುಗವಾಗಿ ಪರಿಣಮಿಸುತ್ತಿರುವ ಈ ಆಧುನಿಕ ಯುಗದಲ್ಲಿ ನಾಡಿನ ಜನರು ತಮ್ಮ ಭಾಷಾ ಸ್ವಾಭಿಮಾನವನ್ನು ತೊರೆದು ಅನ್ಯ ಭಾಷೆಗಳತ್ತ ವಾಲುತ್ತಿದ್ದಾರೆ. ಈ ಕಾರಣಕ್ಕೆ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಿಭಾಯಿಸಬೇಕು ಎಂದರು.

ನಂತರ ಪಟ್ಟಣದ ವಿವಿಧ ರಸ್ತೆ ಮುಖಾಂತರ ಕನ್ನಡಾಂಬೆಯ ಭಾವಚಿತ್ರವನ್ನಿರಿಸಿ ನಾಡಧ್ವಜದಿಂದ ಅಲಂಕೃತ ವಾಹನದಲ್ಲಿ,ಶಾಲಾ ವಿದ್ಯಾರ್ಥಿಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

 ಈ ಸಂದರ್ಭದಲ್ಲಿ ಶಾಸಕ ಆರ್ ಬಸನಗೌಡ ತುರುವಿಹಾಳ, ತಹಶೀಲ್ದಾರ್ ಸುಧಾ ಅರಮನೆ, ಪುರಸಭೆ ಮುಖ್ಯ ಅಧಿಕಾರಿ ನರಸ ರೆಡ್ಡಿ, ಸಿಪಿಐ ಬಾಲಚಂದ್ರ ಲಕ್ಕಂ,ನೀರಾವರಿ ಇಲಾಖೆಯ ಅಧಿಕಾರಿ ಮಲ್ಲಯ್ಯ, ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸಪ್ಪ ತನಿಖೆ ದಾರ, ಮಸ್ಕಿ ಪಟ್ಟಣದ ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ ಗಣ್ಯರು ಇತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಐತಿಹಾಸಿಕ ಚರಿತ್ರೆಯ ಚಿರಿಬಿ ಮೂಗಬಸವೇಶ್ವರ ಸ್ವಾಮಿ ದೇವಸ್ಥಾನ ಚಿರಿಬಿಗೆ ಸೇರಿದ್ದು!

" ಕೆಲಸದ ವೇಳೆ ಅಸಡ್ಯ ತೋರುತ್ತಿರುವ ಸಿಬ್ಬಂದಿ ಕಿರಣ್ ಕುಮಾರ್ ಕ್ರಮವಹಿಸುವಂತೆ ಆಗ್ರಹ"

*🪔ನಿಧನ ವಾರ್ತೆ : ತಳವಾರ ದುರುಗಪ್ಪ -ನಿಧನ 🪔*