ವಿದ್ಯಾರ್ಥಿನಿಯರ ಅಸ್ವಸ್ಥತೆಗೆ ಕಾರಣ ಅದವರನ್ನು ಅಮಾನತು ಮಾಡಲು ಸಿಇಒಗೆ ಮನವಿ

ಮಸ್ಕಿ : ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಮೆಟ್ರಿಕ್ ಪೂರ್ವ ವಸತಿ ನಿಲಯ ವಿದ್ಯಾರ್ಥಿನಿಯರ ಅಸ್ವಸ್ಥತೆಗೆ ಕಾರಣರಾದವರನ್ನು ಅಮಾನತು ಮಾಡಬೇಕು ಎಂದು ತಹಸಿಲ್ದಾರರು ಮಸ್ಕಿ ಇವರ ಮುಖಾಂತರ

 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ರಾಯಚೂರು ಇವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

     

 ದಿನಾಂಕ 11- 12- 2023 ಸೋಮವಾರದಂದು ಮಾನವಿ ಪಟ್ಟಣದಲ್ಲಿರುವ ಫಾತಿಮಾ ನಗರದ ಸಮಾಜ ಕಲ್ಯಾಣ ಇಲಾಖೆಗೆ ಒಳಪಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸೋಮವಾರ ಮಧ್ಯಾಹ್ನ ಸಮಯದಲ್ಲಿ ಪಲಾವ್ ಊಟ ಸೇವಿಸಿದ ವಿದ್ಯಾರ್ಥಿನಿಯರನ್ನು ಜಿಲ್ಲೆಯ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಕೆಲ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಇದಕ್ಕೆ ಕಾರಣ ವಸತಿ ನಿಲಯಕ್ಕೆ ಬಾರದೇ ನಿರ್ಲಕ್ಷ್ಯ ವಹಿಸಿ ಬೇಜವಾಬ್ದಾರಿ ತನದಿಂದ ಕಾರ್ಯನಿರ್ವಹಿಸುವ ಮೇಲ್ವಿಚಾರಕರು ಕಳಪೆ ಮಟ್ಟದ ಆಹಾರ ವಿತರಿಸಿದ್ದಾರೆ ಎಂದು ವಿದ್ಯಾರ್ಥಿನಿಯರು ಹಾಗೂ ಸ್ಥಳೀಯರು ಆರೋಪಿಸಿದ್ದಾರೆ. ಆದರಿಂದ ಈ ಕೂಡಲೇ ಘಟನೆಗೆ ಕಾರಣರಾದ ಮೇಲ್ವಿಚಾರಕರು ಹಾಗೂ ತಾಲೂಕು ಸಹಾಯಕ ನಿರ್ದೇಶಕರು ಗ್ರೇಡ್ ಒನ್ ಮಾನವಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಇವರನ್ನು ಕೂಡಲೇ ಅಮಾನತು ಮಾಡಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ (ರಿ) ತಾಲೂಕು ಸಮಿತಿ ಮಸ್ಕಿ ವತಿಯಿಂದ ತಾಲೂಕ ದಂಡಾಧಿಕಾರಿ ಅರಮನೆ ಸುಧಾ ರವರ ಮೂಲಕಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ರಾಯಚೂರು ಇವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಇದೇ ಸಂದರ್ಭದಲ್ಲಿಮೌನೇಶ್ ತುಗ್ಗಲದಿನ್ನಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕಾ ಅಧ್ಯಕ್ಷರು,ಬಸವಲಿಂಗ ಪರಾಪೂರಾ,

ಅಮರೇಶ ಭೋವಿ,ಮೌನೇಶ್ ಭೋವಿ ಮೆದಿಕಿನಾಳ,ರವಿಕುಮಾರ್ ದುರ್ಗಾ, ಕ್ಯಾಂಪ್,ಮಹೇಶ್, ರವಿನಾಯಕ್, ಪಂಪಾಪತಿ, ಎಸ್ ಯಲ್ಲಪ್ಪ ಸೇರಿದಂತೆ ಇನ್ನಿತರರು ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ