ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು:ಪಿಎಸ್ಐ ಗೀತಾಂಜಲಿ ಶಿಂಧೆ

ಕೊಟ್ಟೂರು ಕೊಟ್ಟೂರೇಶ್ವರ ಮಹಾವಿದ್ಯಾಲಯ ಹಾಗೂ ಪೋಲಿಸ್ ಇಲಾಖೆ ಕೊಟ್ಟೂರು NSS.NCC. IQAC ವತಿಯಿಂದ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಮತ್ತು ragging ತಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 

ಈ ಕಾರ್ಯಕ್ರಮಕ್ಕೆ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸಿದ್ದರಾಮ ಕಲ್ಮಠ ಸರ್ ಹಾಗೂ ಪ್ರಾಂಶುಪಾಲರಾದ ಡಾ. ಎಂ ರವಿಕುಮಾರ್ ಇವರು ಪ್ರೋತ್ಸಾಹಿಸಿ ಸಹಕಾರ ನೀಡಿದರು.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಗೀತಾಂಜಲಿ ಸಿಂಧೆ ಪಿಎಸ್ಐ ಕೊಟ್ಟೂರು ಇವರು ಮಾತನಾಡಿ ವಿದ್ಯಾರ್ಥಿಗಳು ಇಂದಿನ ಸಮಾಜದಲ್ಲಿ ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು. ಅದರಲ್ಲೂ ಮುಖ್ಯವಾಗಿ ಮಧ್ಯಪಾನ ಧೂಮಪಾನ ಡ್ರಗ್ಸ್ ಮುಂತಾದ ವ್ಯಸನಗಳಿಂದ ಮುಕ್ತರಾಗಬೇಕೆಂದು ಕರೆ ನೀಡಿದರು.

ವಿದ್ಯಾರ್ಥಿಗಳ ಜೀವನ ಅತ್ಯಮೂಲ್ಯವಾದದ್ದು ಹಾಗಾಗಿ ತಾವು ಸ್ವರ್ದಾತ್ಮಕ ಯುಗದಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಪಠ್ಯಪುಸ್ತಕಗಳನ್ನು ಓದಿ ಉತ್ತಮ ಅಧಿಕಾರಿಗಳಾಗಿ ಸಮಾಜದಲ್ಲಿ ಸೇವೆ ಸಲ್ಲಿಸಿ ಎಂದು ತಿಳಿಸಿದರು.

ನಂತರ ಮಾತನಾಡಿದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರೊಫೆಸರ್ ಕೃಷ್ಣಪ್ಪ ಮಾತನಾಡಿ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಿಂದ ಉತ್ತಮ ಸಮಾಜವನ್ನು ಕಟ್ಟಲು ಸಾಧ್ಯ ಹಾಗಾಗಿ ಪ್ರತಿಯೊಬ್ಬರೂ ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಡಾ. ಶಿವಕುಮಾರ್ . ಉಮೇಶ್ ಕೆ. ಬಸವರಾಜ ಬಣಕಾರ್ ಹಾಗೂ ಬೋಧಕ ಬೋಧಕ್ಕೆತರ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ರಾಧಾಸ್ವಾಮಿ. ಕೆ ಪಿ ಸಹಾಯಕ ಪ್ರಾಧ್ಯಾಪಕರು ನಿರೂಪಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ