ಲಿಂಗ ಆಧಾರಿತ ದೌರ್ಜನ್ಯ ತಡೆಗೆ ಶ್ರಮಿಸಿ ; ವಕೀಲೆ ಫರೀದಾ ಬೇಗಂ ಅಭಿಮತ

ಮಸ್ಕಿ : ತಾಲ್ಲೂಕಿನ ಅಂಕುಶದೊಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 

ಜೀವನ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ) ಅಂಕುಶದೊಡ್ಡಿ ಆಶ್ರಯದಲ್ಲಿ ಏರ್ಪಡಿಸಿದ್ದ ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ಧದ ರಾಷ್ಟ್ರೀಯ ಆಂದೋಲನ ಹಾಗೂ ಮಾಸಿಕ ಸಂತೆ ಕಾರ್ಯಕ್ರಮ ಜರುಗಿತು.

ಜೀವನ ಜ್ಯೋತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ) ಅಂಕುಶದೊಡ್ಡಿ ಆಶ್ರಯದಲ್ಲಿ ಏರ್ಪಡಿಸಿದ್ದ ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ಧದ ರಾಷ್ಟ್ರೀಯ ಆಂದೋಲನ ಹಾಗೂ ಮಾಸಿಕ ಸಂತೆ ಕಾರ್ಯಕ್ರಮ

 ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು ಸಮಾಜದಲ್ಲಿ ಸಂಘಸಂಸ್ಥೆಗಳು, ಪ್ರಜ್ಞಾವಂತರು ಶರಣರು ಸಂತರು ಜಾಗ್ರತಿ ಮೂಡಿಸುತ್ತಿದ್ದರು. ಮಹಿಳೆಯರು ಶೋಷಣೆ ಮತ್ತು ದೌರ್ಜನ್ಯಕ್ಕೆ ಒಳಗಾಗುತ್ತಿರುವುದು ಕಳವಳಕಾರಿಯಾಗಿದೆಯೆಂದರು

ಮಹಿಳೆಯರಿಗೆ ಪುರುಷರು ಸಹಕಾರ ಬೆಂಬಲ ಪ್ರೋತ್ಸಾಹ ನೀಡುವ ಮೂಲಕ ಬೆನ್ನೆಲುಬಾಗಿ ನಿಲ್ಲಬೇಕೆಂದು ಮನವಿ ಮಾಡಿದರು. ಮಹಿಳೆಯರು ಜಾಗೃತರಾದಾಗ ಮಾತ್ರ ಲಿಂಗತ್ವ ಆಧಾರಿತ ದೌರ್ಜನ್ಯ ದಿಂದ ಹೊರಬರಲು ಸಾಧ್ಯವೆಂದು ಅಭಿಪ್ರಾಯಪಟ್ಟರು.

ನಂತರತಾಲೂಕು ಪಂಚಾಯತ್ ವಲಯ ಮೇಲ್ವಿಚಾರಕ ಪ್ರಕಾಶ್ ಬಿಆರ್ ಇಪಿ ಭವಾನಿ ಮಾತನಾಡಿದರು.

ಸಂತೆಕಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶ್ರೀದೇವಿ ಹಾಗೂ ಶಶಿರೇಖಾ ಮಹಿಳೆಯರ ಸುರಕ್ಷತೆಯ ಬಗ್ಗೆ ಮಾಹಿತಿ ಹಂಚಿಕೊಂಡರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಕುಶದೊಡ್ಡಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ನಾಗೇಶ್ ವಹಿಸಿಕೊಂಡಿದ್ದರು.

ನಂತರ ಲಿಂಗತ್ವ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಇದೇ ಸಂದರ್ಭದಲ್ಲಿ ಗ್ರಾಪಂ ಮಟ್ಟದ ಒಕ್ಕೂಟದ ಅಧ್ಯಕ್ಷೆ ರಘುಬಾಯಿ ಶಾಲೆಯ ಮುಖ್ಯ ಶಿಕ್ಷಕ ದುರುಗಣ್ಣ ಹೂವಿನಭಾವಿ, ಎಂ.ಬಿ.ಕೆ ವೀರಮ್ಮ ಎಲ್ ಸಿಆರ್ ಪಿ, ಸಿದ್ದಮ್ಮ ಹಾಗೂ ಪಾರ್ವತಿ ಪಶುಸಖಿ ಯಶೋಧ ಕೃಷಿಸಖಿ ದೇವಮ್ಮ ಹಾಗೂ ಗ್ರಾಪಂ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯರು ಒಕ್ಕೂಟದ ಸದಸ್ಯರು ಗ್ರಾಪಂ ಸಿಬ್ಬಂದಿಗಳು ಹಾಗೂ ಗ್ರಾಮದ ಮಹಿಳೆಯರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ