ಅಮರಶಿಲ್ಪಿ ಜಕಣಾಚಾರಿ ಜಯಂತಿ ಪೂರ್ವಭಾವಿ ಸಭೆ
ಮಸ್ಕಿ: ಹೊಸ ವರ್ಷದ ಆರಂಭದ ದಿನ ಜ.1ರಂದು ನಡೆಯಲಿರುವ ಅಮರಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ ಸಂಬಂಧ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಪಟ್ಟಣದ ತಹಸೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿತ್ತು.
ಈ ಸಮಯದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಿರಸ್ತೇದಾರ್ ಆಖ್ತರ್ ಅಲಿ ಮಾತನಾಡಿ; ತಾಲೂಕಿನಲ್ಲಿ ಜಕಣಾಚಾರಿ ಜಯಂತಿಯನ್ನು ಅಚ್ಚುಕಟ್ಟಾಗಿ ನಡೆಸಲು ಸಾರ್ವಜನಿಕರ ಸಹಕಾರ ಅಗತ್ಯ ಜೊತೆಗೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕೈ ಜೋಡಿಸಬೇಕು ಎಂದರು.
ನಂತರ ವಿಶ್ವಕರ್ಮ ಸಮಾಜದ ಪಟ್ಟಣದ ಅಧ್ಯಕ್ಷ ಉದಯ ಕುಮಾರ ಪತ್ತಾರ ಮಾತನಾಡಿ; ತಾಲೂಕಿನ ಎಲ್ಲಾ ಸಮುದಾಯದ ಮುಖಂಡರು ಎಲ್ಲಾ ರಾಷ್ಟೀಯ ಹಬ್ಬಗಳಲ್ಲಿ ಪಾಲ್ಗೊಳ್ಳಬೇಕು. ರಾಷ್ಟೀಯ ನಾಯಕರು ಒಂದೇ ಸಮುದಾಯಕ್ಕೆ ಸೇರಿದವರಲ್ಲ. ಅಲ್ಲದೆ ಇಂತಹ ಸಭೆಗಳಿಗೆ ಬಾರದ ಅಧಿಕಾರಿಗಳ ವಿರುದ್ಧ ಕ್ರಮ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು
ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಮುಖಂಡರು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ