ಮಸ್ಕಿ ಕ್ಷೇತ್ರದ ಆಡಳಿತ ಯಂತ್ರ ಸಂಪೂರ್ಣ ಕುಸಿತ ಅಕ್ರಮ ದಂಧೆಗಳು ರಾಜಾರೋಷವಾಗಿ ನಡೆಯುತ್ತಿವೆ. ಶಾಸಕರು ಕ್ಷೇತ್ರದ ಅಭಿವೃದ್ಧಿ ಮರೆತಿದ್ದಾರೆ : ಪ್ರತಾಪ್ ಗೌಡ ಆರೋಪ.
ಮಸ್ಕಿ: ನಾರಾಯಣಪೂರ ಬಲದಂಡೆಯ 5 (ಎ) ಉಪ ಕಾಲುವೆ ಯೋಜನೆ ಸಾಧ್ಯವಿಲ್ಲ ಎಂದು ಗೊತ್ತಿದ್ದರೂ ಸಹ ಚುನಾವಣೆ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದರೆ ಯೋಜನೆ ಜಾರಿ ಮಾಡುತ್ತೇವೆ ಎಂದುಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದು 6 ತಿಂಗಳಲ್ಲಿ ತನ್ನ ನಿಜ ಬಣ್ಣ ಬಯಲು ಮಾಡಿದೆ ಎಂಬುದಕ್ಕೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಸದನದಲ್ಲಿ ನೀಡಿದ ಉತ್ತರವೇ ಸಾಕ್ಷಿ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಜನರಿಗೆ ಮಾತುಕೊಟ್ಟಂತೆ ಸರ್ಕಾರದ ಇದೀಗ 5 (ಎ) ಕಾಲುವೆ ಯೋಜನೆ ಜಾರಿ ಮಾತು ಉಳಿಸಿಕೊಳ್ಳಲಿ. ಇಲ್ಲದಿದ್ದರೆ ಬಿಜೆಪಿಯಿಂದ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ನೀರಾವರಿ ವಂಚಿತ ಗ್ರಾಮಗಳಿಗೆ ವಟಗಲ್ ಬಸವೇಶ್ವರ ಏತ ಹರಿ ನೀರಾವರಿ ಯೋಜನೆಗೆ ಮುಂಜೂರಾತಿ ನೀಡಿಸಿದ್ದೆ. ಆದರೆ, ಕಾಂಗ್ರೆಸ್ ಸರ್ಕಾರ ಅದನ್ನು ರದ್ಧು ಮಾಡಿತು. ಈಗ ಈ ರೈತರಿಗೆ ಶಾಸ್ವತ ನೀರಿನಿಂದ ವಂಚಿತ ಮಾಡಿದೆ ಎಂದು ಆರೋಪಿಸಿದರು.
ನನ್ನ ರಾಜಿನಾಮೆಯಿಂದ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸಲು ಬಿಜೆಪಿ ಸರ್ಕಾರದಿಂದ 500 ಕೋಟಿ ಅನುದಾನ ನೀಡಿತು. ನಾನು ಸೋತರು ಪರವಾಗಿಲ್ಲ ಕ್ಷೇತ್ರದ ಜನರಿಗೆ ನನ್ನಿಂದ ಅನುಕೂಲವಾಯಿತಲ್ಲ ಎಂಬ ತೃಪ್ತಿ ಇದೆ ಎಂದರು.
ಮಸ್ಕಿ ಕ್ಷೇತ್ರದಲ್ಲಿ ತಾಲ್ಲೂಕು ಆಡಳಿತ ಯಂತ್ರ ಸಂಪೂರ್ಣ ಕುಸಿದು ಹೋಗಿದೆ. ಅಕ್ರಮ ದಂದೆಗಳು ರಾಜಾರೋಷವಾಗಿ ನಡೆಯುತ್ತಿವೆ. ಶಾಸಕರು ಕ್ಷೇತ್ರದ ಅಭಿವೃದ್ಧಿ ಮರೆತಿದ್ದಾರೆ ಎಂದು ದೂರಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಸಿದ್ದಣ್ಣ ಹೂವಿನಭಾವಿ, ಡಾ. ಬಿ.ಎಚ್. ದಿವಟರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ ಮಲ್ಲು ಯಾದವ್, ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ