ವಸತಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ ಜಿ.ಪಂ ಸಿ ಇ ಒ ಸೂಚನೆ

ಮಸ್ಕಿ : ತಾಲೂಕಿನ ವಟಗಲ್, ಪಾಮನಕಲ್ಲೂರಿನ ಮುರಾರ್ಜಿ ವಸತಿ ಶಾಲೆಗೆ ಬುಧವಾರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಭೇಟಿ ನೀಡಿ ಪರಿಶೀಲಿಸಿದರು. 

ವಟಗಲ್ ವಸತಿ ಶಾಲೆಗೆ ಹಾಗೂ ಪಾಮನಕಲ್ಲೂರಿನ ವಸತಿ ಶಾಲೆಯ ಕೊಠಡಿ, ಗ್ರಂಥಾಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಡುಗೆಗೆ ಬಳಸುವ ನೀರನ್ನು ಹೊರಗೆ ಹರಿಸುವುದರಿಂದ ಸೊಳ್ಳೆಗಳ ಕಾಟ ಆರಂಭವಾಗುತ್ತದೆ. ಹೀಗಾಗಿ ನೀರಿನ ವಿಲೇವಾರಿಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಒಂದು ವಾರದೊಳಗೆ ಸೋರುತ್ತಿರುವ ಛಾವಣಿ ದುರಸ್ತಿ ಕೈಗೊಳ್ಳಬೇಕು. ನಿರುಪಯುಕ್ತವಾಗಿರುವ ಶೌಚಾಲಯ ಬಳಕೆಗೆ ಮೂಲ ಸೌಕರ್ಯ ಕಲ್ಪಿಸಬೇಕು. ಮಕ್ಕಳ ವಸತಿ ಕೊಠಡಿಗಳಿಗೆ ಭೇಟಿ ನೀಡಿ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂಥ ವಾತಾವರಣ ಕಲ್ಪಿಸಬೇಕು ಎಂದು ಮುಖ್ಯ ಶಿಕ್ಷಕರಿಗೆ ಸೂಚಿಸಿದರು. 

ನಂತರ ಅಂಕುಶದೊಡ್ಡಿ ಗ್ರಾಪಂಯ ಹೂವಿನಬಾವಿಯ ಸಾಮಾಜಿಕ ಅರಣ್ಯ ಇಲಾಖೆಯ ನರ್ಸರಿಗೆ ಭೇಟಿ ನೀಡಿ, ಸಸಿಗಳ ಪೋಷಣೆ ಕುರಿತು ಮಾಹಿತಿ ಪಡೆದರು. ಸದರಿ ನರ್ಸರಿಯಲ್ಲಿ ಜಾಗದ ಕೊರತೆ ಇರುವ ಕಾರಣ ಮಾರಲದಿನ್ನಿ ಜಲಾಶಯದ ಹತ್ತಿರ ಮತ್ತೊಂದು ನರ್ಸರಿ ಅಭಿವೃದ್ಧಿಗೆ ಅನುಮೋದನೆ ನೀಡಲು ಇಒ ಉಮೇಶ್ ತಿಳಿಸಿದರು. ಪ್ರಸಕ್ತ ಸಾಲಿನ ಕ್ರಿಯಾ ಯೋಜನೆಯಲ್ಲಿ ಕಾಮಗಾರಿ ಸೇರಿಸಿ ಜಿಲ್ಲಾ ಪಂಚಾಯತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಿಇಒ ರಾಹುಲ್ ತುಕಾರಾಂ ಪಾಂಡ್ವೆ ತಿಳಿಸಿದರು. 

ಹರ್ವಾಪುರದಲ್ಲಿ ನರೇಗಾದಡಿ ನಿರ್ಮಿಸುತ್ತಿರುವ ಅಂಗನವಾಡಿ ಕೇಂದ್ರ ಪರಿಶೀಲಿಸಿದರು. ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಗೇಟ್ ಅಳವಡಿಸಬೇಕು ಎಂದರು. ಜೆ.ಜೆ.ಎಂ ನಡಿ ಕೈಗೊಂಡಿರುವ ಕಾಮಗಾರಿಯನ್ನು ಬೇಗ ಮುಗಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಎಇಇ ಅವರಿಗೆ ಸೂಚಿಸಿದರು. ಉದ್ಬಾಳ, ದುರ್ಗಾ ಕ್ಯಾಂಪ್ ನಲ್ಲಿ ಜೆಜೆಎಂ ಕಾಮಗಾರಿ ಪರಿಶೀಲಿಸಿದರು. 

ಈ ವೇಳೆ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಉಮೇಶ್, ಸಹಾಯಕ ನಿರ್ದೇಶಕರಾದ (ಗ್ರಾಮೀಣ ಉದ್ಯೋಗ) ಶಿವಾನಂದರೆಡ್ಡಿ, ಸಿಇಒ ಅವರ ಆಪ್ತ ಸಹಾಯಕರಾದ ವಾಹೀದ್, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಮಣ್ಣ ನಾಡಗೇರಿ, ಅರಣ್ಯ ಇಲಾಖೆ ಅಧಿಕಾರಿಗಳಾದ ವಿಜಯಕುಮಾರ್, ತಾಂತ್ರಿಕ ಸಂಯೋಜಕರಾದ ಶಿವಲಿಂಗಯ್ಯ ಹಿರೇಮಠ, ತಾಂತ್ರಿಕ ಸಹಾಯಕ ಅಭಿಯಂತರರಾದ ಪ್ರದೀಪ್, ಗ್ರಾ.ಪಂ ಸಿಬ್ಬಂದಿ ಆನಂದ, ಮಂಜುನಾಥ ಇತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ