“ವಿಶ್ವಮಾನವ ದಿನಾಚರಣೆ”

ಕೊಟ್ಟೂರು ರಾಷ್ಟ್ರಕವಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ತಾಲೂಕ ಕಛೇರಿ, ಕೊಟ್ಟೂರಿನಲ್ಲಿ ಇಂದು “ವಿಶ್ವಮಾನವ ದಿನಾಚರಣೆ” ಕಾರ್ಯಕ್ರಮವನ್ನು ಆಚರಿಸಲಾಯಿತು. ತಹಶೀಲ್ದಾರರಾದ ಶ್ರೀ ಅಮರೇಶ್.ಜಿಕೆ ರವರು ಕುವೆಂಪುರವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಿ, ಕನ್ನಡ ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆ ಹಾಗೂ ಮನುಕುಲದ ಒಳಿತಿಗೆ ಶ್ರಮಿಸಿದ ಅವರ ಕೊಡುಗೆಯನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಪ್ರಭಾರೆ ಗ್ರೇಡ್-2 ತಹಶೀಲ್ದಾರರಾದ ಶ್ರೀಮತಿ ಲೀಲಾ ಎಸ್, ಶಿರಸ್ತೇದಾರರಾದ ಅನ್ನದಾನೇಶ ಬಿ ಪತ್ತಾರ, ಕಂದಾಯ ಇಲಾಖೆ ಹಾಗೂ ಭೂಮಾಪನ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಯಾಶೀಲರಾಗಲು ಕ್ರೀಡೆಗಳು ಸಹಕಾರಿ -ಕೆ ನೇಮಿರಾಜನಾಯ್ಕ

ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಹ್ವಾನ ನೀಡದ ಪಿಡಿಓ,ಕಾರ್ಯದರ್ಶಿ

*ಪ.ಪಂ. ಸದಸ್ಯರ ಅಧಿಕಾರಾವಧಿ ಅಂತ್ಯ : ಆಡಳಿತಾಧಿಕಾರಿಯಾಗಿ ಜಿ.ಕೆ. ಅಮರೇಶ್ ನೇಮಕ*