ಬರ ಪರಿಹಾರ ಹಣ ಪಡೆಯಬೇಕಾದರೆ ರೈತರು ಎಫ್ಐಡಿ ನೊಂದಣಿ ಕಡ್ಡಾಯ

ಮಸ್ಕಿ : ಬರ ಪರಿಹಾರದ ಹಣ ಪಡೆಯಬೇಕಾದರೆ ರೈತರು ಕಡ್ಡಾಯವಾಗಿ ಎಫ್‌ಐಡಿ ನೊಂದಣಿ ಮಾಡಿಸಲೇಬೇಕು. ಒಂದು ವೇಳೆ ಎಫ್‌ಐಡಿ ನೊಂದಣಿ ಮಾಡಿಸದಿದ್ದರೆ ಹಣ ಬರುವುದಿಲ್ಲ. ಎಫ್‌ಐಡಿ ಮಾಡದೆ ಇರುವ ರೈತರು ಕೂಡಲೇ ತಮ್ಮ ಸಮೀಪದ ಸಾಮಾನ್ಯ ಸೇವಾ ಕೇಂದ್ರಕ್ಕೆ ಅಥವಾ ಸ್ಥಳೀಯ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ ಎಫ್‌ಐಡಿ ನೊಂದಣಿ ಮಾಡಿಸಬೇಕು ಎಂದು ಗುಡುದೂರು ಕೃಷಿ ಇಲಾಖೆ ಅಧಿಕಾರಿ ಅನ್ನಪೂರ್ಣ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ‘‘2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸಂಭವಿಸಿರುವ ಬರ ಪರಿಸ್ಥಿತಿಯನ್ನು ಮನಗಂಡ ರಾಜ್ಯ ಸರಕಾರ ಸಿಂಧನೂರು ಹಾಗೂ ಮಸ್ಕಿ

ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿದೆ. ಈ ಸಂಬಂಧ ಸರಕಾರದಿಂದ ಪರಿಹಾರ ಧನ ಬಿಡುಗಡೆಯಾದ ಸಂದರ್ಭದಲ್ಲಿ ರೈತರಿಗೆ ಅವರ ಪೋಟ್ಸ್ ಐಡಿಗೆ ಸೇರಿಸಿರುವ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಹಾರ ಧನವನ್ನು ನೇರವಾಗಿ ಡಿಬಿಟಿ ಮೂಲಕ ವಿತರಿಸಲಾಗುತ್ತದೆ. ಆದ್ದರಿಂದ, ಎಲ್ಲಾರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ತಮ್ಮ ಎಫ್‌ಐಡಿಗೆ ಸೇರಿಸಲು ಮತ್ತು ಯಾವ ರೈತರು ಇಲ್ಲಿಯವರೆಗೆ ಎಫ್‌ಐಡಿಯನ್ನು ಮಾಡಿಸಿಕೊಂಡಿಲ್ಲವೋ ಅವರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಂಪರ್ಕಿಸಲು ಕೋರಲಾಗಿದೆ.

ಎಫ್‌ಐಡಿ ಯನ್ನು ಮಾಡಿಸಲು ರೈತರ ಆಧಾರ್‌ ಕಾರ್ಡ್‌, ಬ್ಯಾಂಕ್‌ ಖಾತೆ ಪುಸ್ತಕದ ಪ್ರತಿ, ತಮ್ಮ ಹೆಸರಿನಲ್ಲಿರುವ ಜಮೀನುಗಳ ಪಹಣಿ ಪ್ರತಿಗಳು, ತಮ್ಮ ಮೊಬೈಲ್‌ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ, (ಪರಿಶಿಷ್ಟ ವರ್ಗದ ರೈತರಿಗೆ ಕಡ್ಡಾಯ) ಪಾಸ್‌ ಪೋರ್ಟ್‌ ಅಳತೆಯ ಒಂದು ಭಾವಚಿತ್ರಗಳನ್ನೊಳಗೊಂಡ ದಾಖಲಾತಿಗಳು ಕಡ್ಡಾಯವಾಗಿದ್ದು, ರೈತರು ಸದರಿ ದಾಖಲಾತಿಗಳನ್ನು ತಪ್ಪದೇ ನೀಡಬೇಕು.

ಪ್ರಸ್ತುತ ನಮ್ಮ ಗುಡುದೂರು ಹೋಬಳಿ ಯಲ್ಲಿ 12,449 ಜಮೀನುಗಳಿದ್ದು, ಅದರಲ್ಲಿ 8,179 ಜಮೀನುಗಳನ್ನು ಮಾತ್ರ ಫ್ರೂಟ್‌ ತಂತ್ರಾಂಶದಲ್ಲಿ ನೋಂದಣಿ ಮಾಡಲಾಗಿದೆ.

ಇನ್ನು 4,270 ಉಳಿದ ರೈತರು ಎಫ್‌ಐಡಿ ಮಾಡಿಸದಿದ್ದರೆ ಬೆಳೆ ಪರಿಹಾರ ಸೇರಿ ಯಾವುದೇ ಸರಕಾರಿ ಸೌಲಭ್ಯಗಳು ಸಿಗುವುದಿಲ್ಲ. ರೈತರು ಜಮೀನು ಎಫ್‌ಐಡಿಯಲ್ಲಿನೋಂದಣಿ ಆಗಿದೆಯೇ ಎಂದು ಪರಿಶೀಲನೆ ಮಾಡಿಕೊಳ್ಳಬೇಕು. ಈಗಾಗಲೇ ಎಫ್‌ಐಡಿ ಮಾಡಿಸಿರುವವರು ಎಲ್ಲಸರ್ವೆ ನಂಬರ್‌ಗಳು ಜೋಡಣೆಯಾಗಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಜಂಟಿ ಖಾತೆದಾರರಾಗಿದ್ದಲ್ಲಿ ಪ್ರತ್ಯೇಕವಾಗಿ ಎಫ್‌ಐಡಿ ಮಾಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ

ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಗುಡುದೂರು ಹೋಬಳಿ ಕೃಷಿ ಅಧಿಕಾರಿ ಅನ್ನಪೂರ್ಣ ಪತ್ರಿಕೆಗೆ ತಿಳಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಎಡೆಮುರಿ ಕಟ್ಟಿದ : ಪಿಎಸ್ಐ ಗೀತಾಂಜಲಿ ಶಿಂಧೆ

ಮಲೆನಾಡಲ್ಲಿ ಮಳೆ:ಭದ್ರಾ ಒಳ ಹರಿವು ಹೆಚ್ಚಳ

ಕೊಟ್ಟೂರು ಪೊಲೀಸ್ ಠಾಣೆಗೆ ಮೊದಲ ಬಾರಿಗೆ ಮಹಿಳಾ ಪಿಎಸ್ಐ ಗೀತಾಂಜಲಿ ಶಿಂಧೆ