ಮತದಾರರ ಪಟ್ಟಿಯಲ್ಲಿ ತಪ್ಪದೇ ಹೆಸರು ನೋಂದಾಯಿಸಿ ಮಸ್ಕಿ ತಾಪಂ ಇಒ ಉಮೇಶ್ ಸಲಹೆ
ಮಸ್ಕಿ : ಮತದಾರರ ಪಟ್ಟಿಯಲ್ಲಿ ಯುವ ಮತದಾರರು ಹೆಸರು ನೋಂದಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಮಸ್ಕಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಉಮೇಶ್ ಸಲಹೆ ನೀಡಿದರು.
ಪಟ್ಟಣದ ಪ್ರಭುವಿತಂ ಕಾಲೇಜಿನಲ್ಲಿ ಸೋಮವಾರ ಭಾರತ ಚುನಾವಣಾ ಆಯೋಗ, ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಪಂ, ತಾಲೂಕು ಆಡಳಿತ ಮತ್ತು ತಾಪಂ ಮಸ್ಕಿ ಇವರ ಆಶ್ರಯದಲ್ಲಿ ಏರ್ಪಡಿಸಿದ್ದ ಯುವ ಮತದಾರರ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಹೊಸ ಮತದಾರರ ನೋಂದಾಣಿಗೆ ಚುನಾವಣಾ ಆಯೋಗದಿಂದ ವಿಶೇಷ ಅಭಿಯಾನ ನಡೆಯಲಿದೆ. ಈ ವೇಳೆ ನಿರ್ದಿಷ್ಟ ಅರ್ಜಿಯೊಂದಿಗೆ ದಾಖಲಾತಿಗಳನ್ನು ಸಲ್ಲಿಸಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಬೇಕು. ಜೊತೆಗೆ ಮನೆಯ ಸುತ್ತ ಮುತ್ತಲಿನ ಅರ್ಹ ಮತದಾರರನ್ನು ಗುರುತಿಸಿ, ಅವರಿಗೆ ಮಾಹಿತಿ ನೀಡಿ ಆಯೋಗದ ಕಾರ್ಯಕ್ಕೆ ಕೈಜೋಡಿಸಬೇಕು ಎಂದರು.
ಈ ವೇಳೆ ಮಸ್ಕಿ ತಾಪಂ ಯೋಜನಾ ಅಧಿಕಾರಿಗಳಾದ ಇಬ್ರಾಹಿಂ ಪಟೇಲ್, ಸಿಬ್ಬಂದಿ ಗಂಗಾಧರ ಮೂರ್ತಿ, ಬಸವರಾಜ್, ಲಕ್ಷ್ಮೀಕಾಂತ, ಕಾಲೇಜು ಉಪನ್ಯಾಸಕರಾದ ಚಂದಾಪಾಷಾ, ಪಂಪಾಪತಿ ಗುತ್ತೇದಾರ, ವಿಜಯ ಕುಮಾರ್, ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ